ಕರಾವಳಿಪುತ್ತೂರುಶಿಕ್ಷಣ

ಅಕ್ಷಯಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

282

ನ್ಯೂಸ್‌ ನಾಟೌಟ್‌: ಪುತ್ತೂರು ಸಮೀಪದ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ದಿಕ್ಸೂಚಿ ತರಬೇತಿ ಕಾರ್ಯಾಗಾರ ನಡೆಯಿತು.

ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಿಜಯ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್, ಜಯರಾಮ್ ರೈ ನುಳಿಯಾಲ್‌ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

ಕೆರಿಯರ್‌ ಕೌನ್ಸಿಲರ್‌ ಆಗಿದ್ದ ಮಹಮ್ಮದ್‌ ರ‍ಫೀಕ್‌ ಮಾತನಾಡಿ, ವಿದ್ಯಾರ್ಥಿ ತನ್ನ ಸಾಮರ್ಥ್ಯ ಅರಿತುಕೊಂಡು ಕೋರ್ಸ್ ಆಯ್ಕೆ ಮಾಡಿಕೊಂಡರೆ ಮಾತ್ರ ಇಚ್ಛೆಯ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು. ಸಾಮಾನ್ಯ ಕೋರ್ಸ್‌ಗಿಂತ ವ್ಯಕ್ತಿಯಾಧಾರಿತ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡರೆ ವೃತ್ತಿ ಕ್ಷೇತ್ರದಲ್ಲಿ ವಿವಿಧ ಅವಕಾಶಗಳನ್ನು ಗಳಿಸಬಹುದು ಎಂದರು.

ಸಮಾಜ ಕಲ್ಯಾಣ ಇಲಾಖೆ ಡಾಟಾ ಎಂಟ್ರಿ ವಿಭಾಗದ ರವಿ ಅವರು ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸಂಪತ್‌ ಪಕ್ಕಳ, ಎಂ.ಡಿ. ಕಲಾವತಿ ನಡುಬೈಲು ಮತ್ತಿತರರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಅರ್ಪಿತ್‌ ಟಿ.ಎ. ಸ್ವಾಗತಿಸಿ, ಉಪನ್ಯಾಸಕಿ ಆಶಿಕಾ ಫರ್ಝಾನಾ ವಂದಿಸಿದರು. ಉಪನ್ಯಾಸಕಿ ಭವ್ಯಾ ನಿರೂಪಿಸಿದರು.

See also  ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ಧರೆಗೆ ಡಿಕ್ಕಿ, ಪುತ್ತೂರು ಮೂಲದ ವಿದ್ಯಾರ್ಥಿನಿ ಧಾರುಣ ಸಾವು !
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget