ಬೆಂಗಳೂರುರಾಜ್ಯ

ಹಿರಿಯ ಲೇಖಕಿ ಡಾ. ಕಮಲಾ ಹಂಪನಾ ನಿಧನ

231

ನ್ಯೂಸ್‌ ನಾಟೌಟ್‌: ಸಾಹಿತಿ, ಹಿರಿಯ ಲೇಖಕಿ ಡಾ. ಕಮಲಾ ಹಂಪನಾ (89) ಅವರು ಇಂದು (ಜೂ.22) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಡಾ. ಕಮಲಾ ಹಂಪನಾ ಅವರು ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಇತ್ತೀಚೆಗೆ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಾ ಹಂಪನಾ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಹಿರಿಯ ಪುತ್ರಿ ರಾಜಶ್ರೀ ಅವರ ನಿವಾಸದಲ್ಲಿ ನೆಲೆಸಿದ್ದರು.

ಕಮಲಾ ಹಂಪನಾ ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದ 18 ನೇ ಕ್ರಾಸ್ ನಲ್ಲಿರುವ ಅವರ ಸ್ವಂತ ನಿವಾಸಕ್ಕೆ ಕರೆತರಲಾಗುವುದು. ಅಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿದುಬಂದಿದೆ.

ಕಮಲಾ ಹಂಪನಾ ಅವರು ಖ್ಯಾತ ವಾಗ್ಮಿಯಾಗಿದ್ದು, ಅವರು ಹಾಗೂ ಅವರ ಪತಿ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರಿಗೂ ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ. ಕಮಲಾ ಹಂಪನಾ ಅವರು ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಹಿರಿಯ ಲೇಖಕಿಯ ನಿಧನಕ್ಕೆ ಸಾಹಿತ್ಯಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

See also  ಎಲ್ಲರನ್ನೂ ಮದುವೆಗೆ ಕರೆದು ದರ್ಶನ್‌ರನ್ನು ಕರೆದಿಲ್ಲ ಯಾಕೆ? ಸ್ವತಃ ಡಾಲಿ ಧನಂಜಯ್ ಕ್ಲ್ಯಾರಿಟಿ ಕೊಟ್ರು ನೋಡಿ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget