ಕರಾವಳಿ

KSRTC ಬಸ್ , ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ, ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಗಂಭೀರ ಗಾಯ

ನ್ಯೂಸ್ ನಾಟೌಟ್: KSRTC ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾ‌ರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್‌ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ, ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಸುಳ್ಯ: ಮಾನಸಿಕ ಅಸ್ವಸ್ಥೆಯ ಅತ್ಯಾಚಾರ ನಡೆಸಿದವನಿಗೆ ಜೈಲು ಶಿಕ್ಷೆ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಕಾಂತಾರ ನಟ ರಿಷಭ್ ಶೆಟ್ಟಿ , ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

ಸುಳ್ಯ:ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ವಿಶೇಷ ಅತಿಥಿಯಾಗಿ ಎನ್‌ಎಂಸಿ ವಿದ್ಯಾರ್ಥಿ ಆಯ್ಕೆ,ರಾಜ್ಯದಲ್ಲಿ ವಿವಿಧ ವಿಶ್ವವಿದ್ಯಾನಿಲಯಗಳಿಂದ 12 ಮಂದಿಗೆ ಮಾತ್ರ ಅವಕಾಶ