ನ್ಯೂಸ್ ನಾಟೌಟ್ :ಅಆಇಈ ಅಕ್ಷರ ಕಲಿತುಕೊಳ್ಳಬೇಕಾದ ಸಮಯದಲ್ಲಿ 7 ವರ್ಷದ ಬಾಲಕನೋರ್ವ ವಿಪರೀತ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಪರಿಣಾಮ ಐದು ವರ್ಷದ ಬಾಲಕಿ ಮೇಲೆ ದೌರ್ಜನ್ಯ ನಡೆಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೊಲೀಸರು ಆರೋಪಿ ಮಗುವನ್ನು ಬಂಧಿಸಿದ್ದಾರೆ.
ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಬಾಲಕಿಯ ಮೇಲೆ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ವೇಳೆ ವೈದ್ಯಕೀಯ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಜಿಲ್ಲಾ ಮಹಿಳಾ ಆಸ್ಪತ್ರೆ ಪ್ರಭಾರಿ ಡಾ.ವಂದನಾ ಸಿಂಗ್ ತಿಳಿಸಿದ್ದಾರೆ. ಇನ್ನು ಪ್ರಥಮ ಚಿಕಿತ್ಸೆ ನಂತರ ಕುಟುಂಬ ಸಮೇತ ಆಕೆಯನ್ನು ಮನೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾನ್ಪುರ ದೇಹತ್‌ನ ಅಕ್ಬರ್‌ಪುರದ ಹಳ್ಳಿಯಲ್ಲಿ ವಾಸಿಸುತ್ತಿದ್ದ ಐದು ವರ್ಷದ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಇದೇ ವೇಳೆ ಆಕೆಯ ನೆರೆಮನೆ ಬಾಲಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಅಮಾಯಕ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಬಾಲಕಿಯ ಅಲ್ಲಿಂದ ಓಡುತ್ತಾ ಬಂದು ಅಮ್ಮನ ಬಳಿ ಅತ್ತಿದ್ದಾಳೆ.ಈ ವೇಳೆ ಬಾಲಕಿಯ ಖಾಸಗಿ ಭಾಗದಿಂದ ರಕ್ತ ಸೋರುತ್ತಿತ್ತು ಎಂದು ತಿಳಿದು ಬಂದಿದೆ.ಬಾಲಕಿಯನ್ನು ವಿಚಾರಿಸಿದಾಗ ಪಕ್ಕದ ಮನೆಯ ಹುಡುಗ ಈ ಕೆಲಸ ಮಾಡಿದ್ದಾನೆ ಎಂದು ಹೇಳಿದ್ದಾಳೆ.ಸಂತ್ರಸ್ತೆಯ ಮನೆಯವರು ಬಾಲಕಿಯನ್ನು ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಪೊಲೀಸರು, ಆರೋಪಿ ಮಗು ಮತ್ತು ಸಂತ್ರಸ್ತೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದು,ಬಾಲಕನ ತಾಯಿ ಕೋಪಗೊಂಡು ಸಂತ್ರಸ್ತೆಯ ತಾಯಿಯೊಂದಿಗೆ ಜಗಳವಾಡಿದ್ದಾರೆಂದು ತಿಳಿದು ಬಂದಿದೆ.
ಬಾಲಕನ ತಾಯಿ ಮಾತ್ರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.ಪೊಲೀಸ್ ಠಾಣೆಯ ಉಸ್ತುವಾರಿ ಸತೀಶ್ ಸಿಂಗ್, ಏಳು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ಯಾವುದೇ ಅಪರಾಧ ಮಾಡಿದರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ.ಆದರೂ ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಒತ್ತಿ 👇