ನ್ಯೂಸ್ ನಾಟೌಟ್: ಅಪ್ರಾಪ್ತೆಗೆ ಬಣ್ಣದ ಮಾತುಗಳನ್ನಾಡಿ ಪ್ರೀತಿಯ ನೆಪದಲ್ಲಿ ಮದುವೆಯ ಭರವಸೆ ನೀಡಿ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕೈಕೊಟ್ಟ ಘಟನೆ ಭಾನುವಾರ(ಜೂ.29) ಚಿಕ್ಕಮಗಳೂರಿನ ಎನ್ಆರ್ ಪುರ ತಾಲೂಕಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪ್ರಸಾದ್ ಎಂಬಾತನ್ನು ಬಂಧಿಸಲಾಗಿದೆ.
ಏನಿದು ಘಟನೆ..?
ಎನ್.ಆರ್.ಪುರ ತಾಲೂಕಿನ ಕಾಡಂಚಿನ ಕುಗ್ರಾಮವೊಂದರಲ್ಲಿ ಬಾಲಕಿಗೆ ಭಾನುವಾರ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯನ್ನು ವಿಚಾರಿಸಿದಾಗ ಆರೋಪಿ ನನ್ನನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಹೇಳಿ ನನ್ನ ಮೇಲೆ ಹತ್ತು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ, ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಹೇಳಿಕೊಂಡಿದ್ದಾಳೆ. ಘಟನೆ ಸಂಬಂಧ ಬಾಲಕಿ ಪೋಷಕರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.