ಕರಾವಳಿಕ್ರೈಂ

ಲೈಂಗಿಕ ದೌರ್ಜನ್ಯ: ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ವಿಸ್ತರಣೆ

464

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಜಿಲ್ಲಾ ನ್ಯಾಯಾಲಯ ನ.14 ರವರೆಗೆ ವಿಸ್ತರಿಸಿದೆ.

ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಿದ್ದರಿಂದ ಶಿವಮೂರ್ತಿ ಮುರುಘಾ ಶರಣರು, ಹಾಸ್ಟಲ್ ವಾರ್ಡನ್ ಹಾಗೂ ಪರಮಶಿವಯ್ಯ ಅವರನ್ನು ಎರಡನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ನ್ಯಾಯಾಂಗ ಬಂಧನದ ಅವಧಿಯನ್ನು ಆರು‌ ದಿನಗಳ ಕಾಲ ವಿಸ್ತರಿಸಿದರು. ಈ ನಡುವೆ ಎರಡನೇ ಪೋಕ್ಸೊ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್ ಅವರನ್ನು ವಶಕ್ಕೆ ನೀಡುವಂತೆ ಕೋರಿದರು. ಇದಕ್ಕೆ ವಕೀಲರು ತಕರಾರು ಸಲ್ಲಿಸಿದ್ದರಿಂದ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

See also  ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗೆ ಆಹ್ವಾನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget