ಕರಾವಳಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಅಂಗಡಿಗೆ ಬೆಂಕಿ, ಅಂಗಡಿಯ ವ್ಯಾಪಾರ ಪರವಾನಗಿ ರದ್ದುಗೊಳಿಸುವಂತೆ ಸಾರ್ವಜನಿಕರ ಆಗ್ರಹ

ನ್ಯೂಸ್‌ ನಾಟೌಟ್‌: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅಂಗಡಿ ಮಾಲೀಕ 40 ವರ್ಷ ಪ್ರಾಯದ ಅಶ್ರಫ್ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದೇ ವಾರದಲ್ಲಿ ಆರೋಪಿಗೆ ಜಾಮೀನು ಕೂಡ ಮಂಜೂರಾಗಿತ್ತು.

ಆರೋಪಿಯು ಅಂಗಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆ ಅಂಗಡಿಯ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಗ್ರಾ. ಪಂಗೆ ಮನವಿ ನೀಡಿದ್ದರು. ಇದೀಗ ಆರೋಪಿ ಅಶ್ರಫ್ ನ ಅಂಗಡಿಗೆ ಯಾರೋ ಅಪರಿಚಿತರು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Related posts

ಸುಳ್ಯ: ನೆಹರು ಮೆಮೊರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರಕ್ಕೆ ಚಾಲನೆ

ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ FIR ದಾಖಲು

ಭಾರತೀಯ ಸೇನೆಯ ಯೋಧನನ್ನು ಅಪಹರಿಸಿ ಹಿಗ್ಗಾಮುಗ್ಗ ಥಳಿಸಿದ ದುಷ್ಕರ್ಮಿಗಳು,ಬೆನ್ನ ಮೇಲೆ ಪಿಎಫ್​ಐ ಎಂದು ಬರೆದ ಕಿಡಿಗೇಡಿಗಳು ಯಾರು?ಈ ಘಟನೆ ಹಿಂದಿನ ಉದ್ದೇಶವೇನು?