Uncategorized

ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ, ಹಲವರ ಸ್ಥಿತಿ ಗಂಭೀರ

ನ್ಯೂಸ್ ನಾಟೌಟ್ : ಆಂಧ್ರದಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಪತ್ತನಂತ್ತಿಟ್ಟ ಳಾಹದಲ್ಲಿ ಶನಿವಾರ ಮಧ್ಯಾಹ್ನ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಬಸ್ ನಲ್ಲಿ ಮಕ್ಕಳು ಸಹಿತ ೪೦ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇವರಲ್ಲಿ 14 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಮಲೆಯಾಳಂ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಗಾಯಾಳುಗಳನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕೇರಳ ಸಚಿವೆ ವೀಣಾ ಜಾರ್ಜ್ ಸೇರಿದಂತೆ ಹಲವಾರು ಮಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಆಧಾರ್ ಕಾರ್ಡ್ ಗೆ ಪಾನ್ ಲಿಂಕ್ ಮಾಡದಿದ್ದರೆ 2023ರ ನಂತರ ಪಾನ್ ಕಾರ್ಡ್ ರದ್ದು

ರಾಹುಲ್ ಗಾಂಧಿ ಬಗ್ಗೆ ‘ನೋ ಕಾಮೆಂಟ್ಸ್’ ಎಂದ ರಿಷಬ್ ಶೆಟ್ಟಿ ವಿಡಿಯೋ ವೈರಲ್:ಭಾರಿ ಚರ್ಚೆ

ರೋಹಿಣಿ ಸಿಂಧೂರಿ ಸಿಂಗಂ ಅಲ್ಲ, ಮೈಸೂರು ಜನರನ್ನ ಮಂಗ ಮಾಡಲು ಹೊರಟಿದ್ದ ಪ್ರಚಾರ ಪ್ರಿಯೆ ..!