ಕ್ರೈಂವೈರಲ್ ನ್ಯೂಸ್

Shakthi Scheme Effect: ಟ್ರಿಪ್‍ ಗೆ ಹೋದ ಪತ್ನಿ ಮನೆಗೆ ಬಂದಿಲ್ಲ..! ಬಸ್ ಟೈಯರ್ ಗೆ ತಲೆಕೊಟ್ಟು ಪತಿರಾಯನ ಅವಾಂತರ! ಬಸ್ ಸಂಚಾರ ಸ್ಥಗಿತ..!

ನ್ಯೂಸ್ ನಾಟೌಟ್‌: ರಾಜ್ಯದಲ್ಲಿ ಶಕ್ತಿ ಯೋಜನೆ (Shakthi Scheme) ಜಾರಿಗೆ ಬಂದಾಗಿನಿಂದ ಒಂದಲ್ಲ ಒಂದು ಅವಾಂತರಗಳು ಬಯಲಾಗ್ತಾನೇ ಇವೆ. ಇದೀಗ ಕುಡುಕ ಪತಿಯೊಬ್ಬ ಟ್ರಿಪ್‍ಗೆ ಹೋದ ತನ್ನ ಪತ್ನಿ (Wife) ಬಂದಿಲ್ಲವೆಂದು ಅವಾಂತರ ಸೃಷ್ಟಿಸಿದ್ದಾನೆ.

ಹೊಸಕೋಟೆಯ ಬಸ್ ನಿಲ್ದಾಣದಲ್ಲಿ ಪತ್ನಿ ವಿರುದ್ಧ ಸಿಟ್ಟಿಗೆದ್ದ ಪತಿ ಬಸ್ ಟೈಯರ್‌ಗೆ ತಲೆಕೊಟ್ಟು ಆತ್ಮ * ಹತ್ಯೆಗೆ ಯತ್ನಿಸಿದ್ದಾನೆ. ಪರಿಣಾಮ ಹೊಸಕೋಟೆ (Hosakote) ಬಸ್ ನಿಲ್ದಾಣದಲ್ಲಿ ಅರ್ಧಗಂಟೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಕೆಲಕಾಲ ಪರದಾಡುವಂತಾಯ್ತು.
ನನ್ನ ಹೆಂಡತಿ ಟ್ರಿಪ್ ಗೆ ಹೋದವಳು ಇನ್ನೂ ವಾಪಸ್ ಬಂದಿಲ್ಲ. ಸಿದ್ದರಾಮಯ್ಯ (Siddaramaiah) ಸರಿಯಿಲ್ಲ, ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ. ಸರ್ಕಾರ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣವನ್ನು ತೆಗೆದು ವ್ಯಕ್ತಿ ಹಾಕಬೇಕೆಂದು ಒತ್ತಾಯಿಸಿದ್ದಾನೆ.

ಕಂಠಪೂರ್ತಿ ಕುಡಿದಿರುವ ವ್ಯಕ್ತಿ ತೂರಾಡಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ ಬಸ್ ಟೈಯರ್ ಗೆ ತಲೆಕೊಟ್ಟು ಪ್ರಾಣಕಳೆದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನೆರೆದ ಜನ ಆತನನ್ನು ರಕ್ಷಣೆ ಮಾಡಿದ್ದಾರೆ. ನಂತರ ಹೊಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

Related posts

ಪಕ್ಷದ ವಿರುದ್ಧ ಹೇಳಿಕೆ ಕೊಟ್ಟ 11 ಬಿಜೆಪಿ ನಾಯಕರಿಗೆ ನೋಟಿಸ್! ಬಹಿರಂಗ ಹೇಳಿಕೆ ನೀಡದಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ

ರೀಲ್ಸ್‌ ಹುಚ್ಚಿಗೆ ಸ್ಟಂಟ್‌ ಮಾಡಲು ಹೋಗಿ ಪ್ರಪಾತಕ್ಕೆ ಬಿದ್ದ ಯುವಕ,ಮುಂದೇನಾಯ್ತು?

ಸೌದಿ ಅರೇಬಿಯಾದಲ್ಲಿ ಅಪಘಾತ: ವಿಟ್ಲ ಮೂಲದ ಯುವಕ ಸಾವು