ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ ಬಳಿಕವೂ ನಿಲ್ಲದ ಹಿಂಸಾಚಾರ..! ಹತ್ಯೆಯಾದವರ ಸಂಖ್ಯೆ 469ಕ್ಕೆ ಏರಿಕೆ..!

198

ನ್ಯೂಸ್ ನಾಟೌಟ್: ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ಮತ್ತು ಭಾರತಕ್ಕೆ ಪಲಾಯನದ ಬಳಿಕವೂ ಹಿಂಸಾಚಾರ ಮುಂದುವರಿದಿದ್ದು, ಕಳೆದ ಮೂರು ದಿನಗಳಲ್ಲಿ ಸಂಘರ್ಷದಿಂದ ಮೃತಪಟ್ಟವರ ಸಂಖ್ಯೆ 232ಕ್ಕೇರಿದೆ. ಬಾಂಗ್ಲಾ ಹಿಂಸಾಚಾರದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 469ಕ್ಕೇರಿದೆ.

ತೀವ್ರ ಸ್ವರೂಪದ ಸರ್ಕಾರ ವಿರೋಧಿ ಹೋರಾಟ ಕಳೆದ ಮೂರು ವಾರಗಳಿಂದ ನಡೆಯುತ್ತಿದ್ದು, ಇದು ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾಗಿದೆ. ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಮೊಹ್ಮದ್ ಯೂನೂಸ್ ನೇತೃತ್ವದ ಮಧ್ಯಂತರ ಸರ್ಕಾರ ರಚನೆಯಾಗಿದೆ.
ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿಗಳು ನಡೆಯುತ್ತಿದ್ದು, ಹತಾಶರಾದ ಬಾಂಗ್ಲಾದೇಶಿಗಳು ಅಕ್ರಮವಾಗಿ ಭಾರತದ ಗಡಿಯೊಳಕ್ಕೆ ನುಸುಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಮಂಗಳವಾರ ಬಹುತೇಕರ ಸಾವು ಸಂಭವಿಸಿದ್ದು, ಮತ್ತೆ ಕೆಲವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಮಧ್ಯೆ ಶೇಖ್ ಹಸೀನಾ ದೇಶದಲ್ಲಿ ಕ್ರಿಮಿನಲ್ ಆರೋಪವನ್ನು ಎದುರಿಸಬೇಕು ಎಂದು ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಆಗ್ರಹಿಸಿದೆ. ಮಾಜಿ ನಾಯಕಿಗೆ ಭಾರತ ಆಶ್ರಯ ನೀಡಿದರೆ, ಭಾರತದ ಜತೆಗಿನ ಸಂಬಂಧಕ್ಕೆ ಧಕ್ಕೆಯಾಗುವ ಅಪಾಯವಿದೆ ಎಂದು ಎಚ್ಚರಿಸಿದೆ.

Click

https://newsnotout.com/2024/08/wayanad-earth-quack-fear-kannada-news-kerala-landslide/
https://newsnotout.com/2024/08/airplane-crash-kannada-news-live-video-kannada-news-brezil/
https://newsnotout.com/2024/08/cat-bite-women-nomore-kannada-news-viral-issue-home-pet/
See also  ಕೊಡಗು: ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಕಾಫಿತೋಟದಲ್ಲಿ ಪತ್ತೆಯಾಯ್ತು ಮಹಿಳೆಯ ಕಾಲು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget