ಕರಾವಳಿ

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

ನ್ಯೂಸ್ ನಾಟೌಟ್: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಹೀಗಾಗಿ ವಾಹನಗಳ ಸಂಚಾರ ನಿಷೇಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಗುರುವಾರ ಬೆಳಗ್ಗೆ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆ ಸಂಚಾರಕ್ಕೆ ಭಾರಿ ತೊಂದರೆ ಆಗಿದ್ದರಿಂದ ಘನ ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿದೆ. ಲಘು ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ದೋಣಿಗಲ್ ನಲ್ಲಿ ಭೂಕುಸಿತ ಸಣ್ಣ ಪ್ರಮಾಣದಲ್ಲಿ ಸಂಭವಿಸಿದ್ದನ್ನು ಸ್ಮರಿಸಬಹುದು.

Related posts

ಮೂರ್ತೆದಾರಿಕೆ ಮಾಡುತ್ತಿದ್ದ ವೇಳೆ ತಾಳೆ ಮರದಿಂದ ಬಿದ್ದ ವ್ಯಕ್ತಿ,ಗಂಭೀರ ಗಾಯಗೊಂಡು ಮೃತ್ಯು

ಸಚಿವ ಅಂಗಾರರೇ ಕೂಡಲೇ ಗೋಳಿತೊಟ್ಟು- ಕೊಕ್ಕಡ ರಸ್ತೆ ಸರಿಪಡಿಸಿ, ಜನರ ಜೀವ ಉಳಿಸಿ, ನ್ಯೂಸ್ ನಾಟೌಟ್ ಕಳಕಳಿ

ಪೊಲೀಸ್ ದೌರ್ಜನ್ಯ ಪ್ರಕರಣ: ಪುತ್ತೂರು ಡಿವೈಎಸ್ಪಿ, ಸಂಪ್ಯ ಎಸ್ಐ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್, ಅರುಣ್ ಪುತ್ತಿಲ ಬರದಿರುತ್ತಿದ್ದರೆ ಹೊಡೆದು ಸಾಯಿಸ್ತಿದ್ದರು!