ಬೆಂಗಳೂರು: ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಸಿನಿಮಾದಲ್ಲಿ ಕೇವಲ ಎರಡು ಹಾಡುಗಳ ಶೂಟಿಂಗ್ ಬಾಕಿ ಉಳಿದಿವೆ. ‘ಟಗರು’ ಯಶಸ್ಸಿನ ಬಳಿಕ ಶಿವರಾಜ್ ಕುಮಾರ್ ಹಾಗೂ ‘ಡಾಲಿ’ ಧನಂಜಯ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಇದಾಗಿರುವುದರಿಂದ ಪ್ರಾರಂಭದಿಂದಲೇ ನಿರೀಕ್ಷೆ ಗರಿಗೆದರಿದೆ. ಇಬ್ಬರೂ ಬೇರೆ ಬೇರೆ ಗೆಟಪ್ ಮೂಲಕ ಮೋಡಿ ಮಾಡಲಿದ್ದಾರೆ ಎಂಬುದು ವಿಶೇಷ. ಈಗಾಗಲೇ ಅಧಿಕೃತವಾಗಿ ಬಿಡುಗಡೆಯಾಗಿರುವ ಶಿವಣ್ಣನ ಹುಲಿ ವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಆಟೋ ಹಾಗೂ ಕಾರುಗಳ ಮೇಲೆ ಶಿವಣ್ಣನ ಪೋಸ್ಟರ್ ರಾರಾಜಿಸುತ್ತಿವೆ.