ಕರಾವಳಿಚಿಕ್ಕಮಗಳೂರುವೈರಲ್ ನ್ಯೂಸ್

ಶೋಭಾ ಕರಂದ್ಲಾಜೆಗೆ ಲೋಕಸಭೆ ಟಿಕೆಟ್​ ಖಚಿತ..? ಶೋಭಾ ಪರ ನಿಂತ ಬಿಎಸ್ ​ವೈ ಹೇಳಿದ್ದೇನು..?

183

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದ್ದು, ಈ ಮಧ್ಯೆ, ಬಿಜೆಪಿ ಕಾರ್ಯಕರ್ತರ ಒಂದು ಬಣದ ‘ಶೋಭಾ ಹಠಾವೋ ಬಿಜೆಪಿ ಬಚಾವೋ’ ಅಭಿಯಾನ ತೀವ್ರಗೊಳ್ಳುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಧ್ಯೆ ಪ್ರವೇಶ ಮಾಡಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ದಿಢೀರ್ ಇಂದು (ಫೆ.22) ಚಿಕ್ಕಮಗಳೂರಿಗೆ ಭೇಟಿ ನೀಡಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದ್ದಾರೆ. ಅಲ್ಲದೇ ಈ ಬಾರಿಯೂ ಸಹ ಶೋಭಾ ಕರಂದ್ಲಾಜೆಗೆ ಟಿಕೆಟ್​ ಸಿಗುವ ಬಗ್ಗೆ ಖಚಿತಪಡಿಸಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದು, ಶೋಭಾ ಗೋಬ್ಯಾಕ್ ಅಭಿಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ವೇಳೆ ಮಾತನಾಡಿದ ಯಡಿಯೂರಪ್ಪ, ಇಂಥ ಅಭಿಯಾನಕ್ಕೆ ಹೆದರಬೇಕಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ.

ಇದು ಷಡ್ಯಂತ್ರದ ಒಂದು ಭಾಗವಾಗಿದೆ. ಇನ್ನು ಮೂರು ದಿನದ ಒಳಗೆ ಎಲ್ಲವೂ ಗೊತ್ತಾಗುತ್ತೆ. 3 ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಶೋಭಾ ಕರಂದ್ಲಾಜೆ ಮೋದಿ ಸಂಪುಟದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಈ ಮೂಲಕ ಶೋಭಾ ಕರಂದ್ಲಾಜೆಗೆ ಈ ಬಾರಿ ಉಡುಪಿ-ಚಿಕ್ಕಮಗಳೂರು ಟಿಕೆಟ್​ ಎನ್ನುವುದನ್ನು ಖಚಿತಪಡಿಸಿದ್ದಾರೆ ಎನ್ನಲಾಗಿದೆ.

ನೇರವಾಗಿ ಬಿಜೆಪಿಯ ಮೂವರು ಹಿರಿಯ ನಾಯಕರಿಗೆ (ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ) ಪತ್ರ ಬರೆದಿರುವ ’ನೊಂದ ಕಾರ್ಯಕರ್ತರು’ ಯಾವ ಕಾರಣಕ್ಕೂ ಶೋಭಾ ಕರಂದ್ಲಾಜೆಗೆ ಮತ್ತೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದರು. ಅಲ್ಲದೇ ‘ಗೋ ಬ್ಯಾಕ್ ಶೋಭಾ’ ಅಭಿಯಾನದ ಮುಂದುವರಿದ ಭಾಗವಾಗಿ ‘ಹಠಾವೋ ಅಭಿಯಾನ’. ಪತ್ರ ಅಭಿಯಾನ, ಗೋ ಬ್ಯಾಕ್ ಶೋಭಾ ಅಭಿಯಾನದ ಜೊತೆ ಬಿಜೆಪಿ ಬಚಾವೋ ಅಭಿಯಾನ ಮಾಡಲಾಗಿತ್ತು. 3583 ದಿನಗಳಲ್ಲಿ 100 ದಿನವೂ ಕ್ಷೇತ್ರಕ್ಕೆ ಬಾರದ ಸಂಸದೆ ನಮಗೆ ಬೇಕೇ? ಕ್ಷೇತ್ರಕ್ಕೆ ಬಾರದ ಸಂಸದೆ ನಮಗೆ ಬೇಡವೇ ಬೇಡ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ವರದಿ ತಿಳಿಸಿದೆ.

See also  ಕಾರು ಮತ್ತು ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯ ನಡುವೆ ಭೀಕರ ಅಪಘಾತ..! ಕಾಸರಗೋಡಿನ ಒಂದೇ ಕುಟುಂಬದ ಐವರು ಮೃತ್ಯು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget