ಕರಾವಳಿಕ್ರೈಂವೈರಲ್ ನ್ಯೂಸ್

ಕೋಟಿಗಟ್ಟಲೆ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಬೆಂಬಲಕ್ಕೆ ನಿಂತರಾ ಕೇಂದ್ರ ಸಚಿವೆ? ಶೋಭಾ ಕರಂದ್ಲಾಜೆ ಹೇಳಿದ್ದೇನು?

270

ನ್ಯೂಸ್‌ ನಾಟೌಟ್‌: ಕೋಟಿಗಟ್ಟಲೆ ಹಣ ವಂಚನೆ ಆರೋಪದ ಮೇಲೆ ಈಗಾಗಲೇ ಹಿಂದೂ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಈ ಪ್ರಕರಣ ದಿನಕೊಂದು ಹೊಸ ಬೆಳವಣಿಗೆ ಪಡೆಯುತ್ತಿದೆ.

ಸಿಸಿಬಿ ವಿಚಾರಣೆಗೂ ಮುನ್ನ ಅನೋರೋಗ್ಯ ಕಾರಣದಿಂದ ಆಸ್ಪತ್ರೆ ಸೇರಿದ್ದಾರೆ, ಆದರೆ ಈಗ ಈ ಪ್ರಕರಣದಲ್ಲಿರುವ ಹಲವರ ಹೆಸರುಗಳು ಹೊರಬರುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಜೊತೆ ಚೈತ್ರ ನಂಟಿತ್ತು ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಈ ಪ್ರಕರಣದ ಕುರಿತು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಶೋಭಾ ಕರಂದ್ಲಾಜೆ “ಚೈತ್ರಾ ಕುಂದಾಪುರ ಅವರೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ, ಇಲ್ಲಿಯವರೆಗೆ ಅವರು ಯಾರು ಎಂದು ನನಗೆ ತಿಳಿದಿಲ್ಲ., ತಪ್ಪು ಯಾರೇ ಮಾಡಿದರೂ ಶಿಕ್ಷೆಯಾಗಬೇಕು” ಎಂದಿದ್ದಾರೆ.

“ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಯಬೇಕು, ಕರ್ನಾಟಕದ ಬಿಜೆಪಿ ನಾಯಕರ ಹೆಸರನ್ನು ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಯಾರನ್ನೂ ಬಿಡಬಾರದು” ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಇನ್ನು “ಚೈತ್ರಾ ಕುಂದಾಪುರ ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದಾಗ ಎಲ್ಲರೊಂದಿಗೆ ಫೋಟೋ ತೆಗೆಸಿಕೊಂಡಿರಬಹುದು ಆದರೆ ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ, ಅವರು ನಮ್ಮ ಸಂಪರ್ಕಕ್ಕೂ ಬಂದಿಲ್ಲ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.

See also  'ಡ್ರೋನ್' ಪ್ರತಾಪ್ ವಿರುದ್ಧ ಮತ್ತೊಂದು ವಂಚನೆ ಕೇಸ್..! ಉದ್ಯಮಿ ಕೈಯಿಂದ 80 ಲಕ್ಷ ರೂ ಪಡೆದಿದ್ನಾ ಪ್ರತಾಪ್..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget