ಕ್ರೈಂದೇಶ-ಪ್ರಪಂಚದೇಶ-ವಿದೇಶಬೆಂಗಳೂರುವೈರಲ್ ನ್ಯೂಸ್

ಶ್ರದ್ದಾ ಪ್ರಕರಣವನ್ನೂ ಮೀರಿಸುವಂತಿದೆ ಬೆಂಗಳೂರು ಕೇಸ್..! 50 ತುಂಡುಗಳನ್ನು ಜೋಡಿಸಿ ವರದಿ ಸಿದ್ಧ ಪಡಿಸುವುದೇ ಸವಾಲು, ಬ್ಯೂಟಿ ಪಾರ್ಲರ್ ​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಪರಾರಿ..!

ನ್ಯೂಸ್‌ ನಾಟೌಟ್‌: ದೆಹಲಿಯಲ್ಲಿ 2022ರ ಮೇ 18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ ದೇಹ ತುಂಡುಗಳನ್ನು ಎಸೆದಿದ್ದ ಘಟನೆ ನಡೆದಿತ್ತು. ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಆದರೆ ಇದಕ್ಕೂ ಮೀರಿ ಇನ್ನಷ್ಟು ಕ್ರೂರವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಲೆಯೊಂದು ನಡೆದದ್ದು ನಿನ್ನೆ(ಸೆ.22) ವರದಿಯಾಗಿತ್ತು, ಈಗ ಅದರ ತನಿಖೆ ಬಹಳಷ್ಟು ಸವಾಲಾಗಿದೆ.

ಇಲ್ಲಿ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಡಲಾಗಿದೆ. ಇನ್ನು ಕೂಡ ಕೊಲೆ ಆರೋಪಿ ಪತ್ತೆಯಾಗಿಲ್ಲ. ಮಹಿಳೆಯ ಕೊಲೆಯ ಸುತ್ತ ಹಲವಾರು ಅನುಮಾನಗಳು ವ್ಯಕ್ತವಾಗಿವೆ.

ಭೀಕರವಾಗಿ ಕೊಲೆಯಾಗಿರುವ ಮಹಾಲಕ್ಷ್ಮಿ ಪರಸಂಗದ ವಿಚಾರಕ್ಕೆ ಕೊಲೆಯಾಗಿದ್ದಾರೆ ಎಂಬ ಅನುಮಾನ ಹುಟ್ಟಿಕೊಂಡಿದೆ. ಮೆನ್ಸ್ ಬ್ಯೂಟಿ ಪಾರ್ಲರ್​ನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ಜೊತೆ ಮೃತ ಮಹಾಲಕ್ಷ್ಮಿ ಸಲುಗೆ ಮತ್ತು ಆತ್ಮೀಯತೆ ಹೊಂದಿದ್ದರು. ಆದರೆ ಕೆಲ ದಿನಗಳಿಂದ ಇಬ್ಬರ ಸಂಬಂಧದಲ್ಲಿ ಬಿರುಕು ಬಿಟ್ಟಿತ್ತು. ಹೀಗಾಗಿ ಮೆನ್ಸ್ ಪಾರ್ಲರ್ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ಹುಟ್ಟಿಕೊಂಡಿದೆ. ಸದ್ಯ ನಾಪತ್ತೆಯಾಗಿರುವ ಮೆನ್ಸ್ ಪಾರ್ಲರ್ ವ್ಯಕ್ತಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ವೈಯಾಲಿಕಾವಲ್ ನಲ್ಲಿ ನಡೆದಿರೊ ಮಹಾಲಕ್ಷ್ಮೀ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿರೊ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆ ರಹಸ್ಯ ಇನ್ನು ನಿಗೂಢವಾಗಿಯೇ ಉಳಿದಿದೆ. ಈ ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೃತಳ ತಾಯಿ ಸೀಮಾ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ.

Click

https://newsnotout.com/2024/09/kollegala-car-kannada-news-friday-near-bus-stand-police-issue/
https://newsnotout.com/2024/09/digital-upi-payment-innovation-by-auto-driver-kannada-news/
https://newsnotout.com/2024/09/bengaluru-express-train-fire-kannada-news-viral-news-fire/
https://newsnotout.com/2024/09/mangaluru-panamburu-beach-kannada-news-nomore-issue/

Related posts

ಮದುವೆ ಆರತಕ್ಷತೆ ಸಮಾರಂಭದಲ್ಲಿ ಹೊಡೆದಾಟ..! ಇಲ್ಲಿದೆ ವೈರಲ್ ವಿಡಿಯೋ

ಕಾಸರಗೋಡು: ‌‍‍ವಜ್ರಾಭರಣ ಕಳವು ಪ್ರಕಣ, ಬಂಟ್ವಾಳದ ಆರೋಪಿ ಅರೆಸ್ಟ್

ಸುರತ್ಕಲ್: ಸಮುದ್ರ ತೀರದಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮೃತದೇಹ ಪತ್ತೆ..! ಆತ್ಮಹತ್ಯೆಯ ಶಂಕೆ..!