ಕ್ರೈಂವೈರಲ್ ನ್ಯೂಸ್

ಸಿದ್ದಗಂಗಾ ಮಠದ ಅನ್ನ ದಾಸೋಹಿ ಶಿವಕುಮಾರ ಸ್ವಾಮೀಜಿಯ ಪುತ್ಥಳಿ ವಿರೂಪಗೊಳಿಸಿದ ಆರೋಪಿ ಅರೆಸ್ಟ್..! ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದ ಎಂದ ಆರೋಪಿ..!

ನ್ಯೂಸ್‌ ನಾಟೌಟ್‌: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎನ್ನಲಾಗಿದೆ.

ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

7 ವರ್ಷಗಳ ಹಿಂದೆ ರಾಜ್‌ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ. ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂದನಂತೆ ವರ್ತಿಸುತ್ತಿದ್ದ. ಹೀಗಾಗಿ, ಶಿವಕುಮಾರ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಶನಿವಾರ ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಇದರ ಜೊತೆಗೆ ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದ್ದ. ಪತ್ರದಲ್ಲಿನ ಕೋಡ್ ಸ್ಕ್ಯಾನ್ ಮಾಡಿದ್ರೆ ಬೈಬಲ್ ಸಿಗುವಂತೆ ಭಿತ್ತಿಪತ್ರ ಹಂಚುತ್ತಿದ್ದ ಎನ್ನಲಾಗಿದೆ.

Click

https://newsnotout.com/2024/12/allu-arjun-pushpa-2-premier-police-viral-news-fh/

Related posts

ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ..! ದಲಿತರ ದೌರ್ಜನ್ಯದ ಬಗ್ಗೆ ದೂರು ನೀಡಿದ್ದಕ್ಕೆ ಪ್ರತೀಕಾರದ ಶಂಕೆ..!

ಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿದ ಪಾಪಿ ಪತಿ..!

” ಅವನು ಸತ್ತೋಯ್ತಾನೆ ಅಂತ ಯೋಚ್ನೆ ಮಾಡ್ತಾ ಇದ್ದೀಯಲ್ಲಾ, 1.5 ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?” ಕಾರಿಗೆ ಗುದ್ದಿದ ಬೈಕ್‌ ಸವಾರನಿಗೆ ಅವಾಚ್ಯವಾಗಿ ನಿಂದಿಸಿದ್ರಾ ಭವಾನಿ ರೇವಣ್ಣ? ಸ್ಥಳೀಯರು ಹೇಳಿದ್ದೇನು?