ಕರಾವಳಿರಾಜಕೀಯವೈರಲ್ ನ್ಯೂಸ್

ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಅವಮಾನ..! ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?

192

ನ್ಯೂಸ್ ನಾಟೌಟ್: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ.

ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು ಎನ್ನಲಾಗಿದೆ.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು ಎಂದು ನಾರಾಯಣ ಗುರುವನ್ನು ಸಿಎಂ ಸ್ಮರಿಸಿದರು.

ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು.
ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಣೆ ನೀಡಿ ಸಿದ್ದರಾಮಯ್ಯ ಮಾತನಾಡಿದರು.

ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು. ನಾರಾಯಣ ಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

See also  ಎಚ್ಚರ..! ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲೇ ವಾಟ್ಸಾಪ್ ಸಂದೇಶ..! ಹಣಕ್ಕೆ ಬೇಡಿಕೆ ಇಟ್ಟವರ ಬಗ್ಗೆ ಐಪಿಎಸ್ ಅನುಪಮ್ ಅಗರ್ವಾಲ್ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget