ವೈರಲ್ ನ್ಯೂಸ್

ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಯುವ ರೈತರ ಮನವಿ! ಅಷ್ಟಕ್ಕೂ ಪತ್ರದಲ್ಲೇನಿದೆ..?

174

ನ್ಯೂಸ್‌ ನಾಟೌಟ್‌: ದೇಶದ ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯರಿಗೆ (Siddaramaiah) ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಬ್ಯಾಡಗಿ ತಾಲೂಕಿನ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ. 5 ರಿಂದ 6 ಎಕರೆ ಜಮೀನು ಇದ್ದರು ಸಹಿತ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ ಎನ್ನಲಾಗಿದೆ.

ನಾವು ಕೂಡ ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವನು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು.

ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಪತ್ರ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎನ್ನಲಾಗಿದೆ.

See also  ಮಂಗಗಳನ್ನು ಕೊಂದು ಬೇಯಿಸಿ ತಿಂದರಾ ಭಿಕ್ಷುಕರು..? ಅವರೊಳಗೆ ಆದ ಜಗಳದಿಂದ ಬಯಲಾಯ್ತ ರಹಸ್ಯ..? ಏನಿದು ವಿಚಿತ್ರ ಘಟನೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget