ಕರಾವಳಿರಾಜಕೀಯವೈರಲ್ ನ್ಯೂಸ್

ಸಿದ್ದರಾಮಯ್ಯನೇ ರಾಮ, ನಾನು ಆಂಜನೇಯ ಎಂದ ಮಾಜಿ ಸಚಿವ..! ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ ಎಂದು ವ್ಯಂಗ್ಯವಾಡಿದ್ದೇಕೆ ಹೆಚ್.ಆಂಜನೇಯ..?

228

ನ್ಯೂಸ್ ನಾಟೌಟ್: “ಸಿಎಂ ಸಿದ್ದರಾಮಯ್ಯ ಅವರೇ ಶ್ರೀರಾಮ, ಮತ್ತೆ ಯಾಕೆ ಆ ರಾಮನಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು” ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

“ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲದ ವಿಚಾರಕ್ಕೆ ಉತ್ತರಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು
ಸ್ವತಃ ಸಿದ್ಧರಾಮಯ್ಯ ಅವರೇ ರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ರಾಮನ ದೇವಸ್ಥಾನ ಇದೆ, ಅಲ್ಲೇ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ, ಅದು ಬಿಜೆಪಿ ಅವರನ್ನು ಕರೆಸಿಕೊಂಡು ಭಜನೆ ಮಾಡುತ್ತಾರೆ” ಎಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಬಗ್ಗೆ ವ್ಯಂಗ್ಯವಾಡಿದ್ದಾರೆ ಎನ್ನಲಾಗಿದೆ.

ನಮ್ಮ ರಾಮ ಎಲ್ಲಾ ಕಡೆಗೂ ಇದ್ದಾನೆ, ನಾನು ಆಂಜನೇಯ. ನಾವೆಲ್ಲಾ ಶ್ರೀರಾಮನ ಭಕ್ತರು. ನಮ್ಮ ಸಮುದಾಯದವರು ರಾಮ, ಆಂಜನೇಯ, ಹನುಮಂತ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಬಿಜೆಪಿ ಅವರದ್ದು ಧರ್ಮಗಳನ್ನು ಒಡೆದಾಳುವ ನೀತಿ ಎಂದರು.
ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಠಿಯ ಭ್ರಮೆ ಬಿಜೆಪಿಗಿದೆ. ಬಿಜೆಪಿ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಎಂದು ಪ್ರಶ್ನಿಸಿದರು. ಅಲ್ಲದೆ ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯೆ? ಎಂದು ಕೇಳಿದ್ದಾರೆ.

ನಾವೆಲ್ಲಾ ಹಿಂದೂಗಳೇ, ಹಿಂದೂ, ಹಿಂದೂ ಧರ್ಮವನ್ನು ಬಿಜೆಪಿ ಕೊಂಡುಕೊಂಡಿಲ್ಲ. ಧರ್ಮದಲ್ಲಿನ ಮೇಲು ಕೀಳು, ಶೋಷಣೆಗೆ ಪರಿಹಾರ ನೀಡಿದ್ದಾರೆಯೇ?, ಮಂದಿರ ನಿರ್ಮಾಣ ಸಾಕು, ಮನೆ-ಮನ ಕಟ್ಟುವ ಕೆಲಸ ಆಗಬೇಕು. ದೇಶದ ಜನ ನಾಯಿ ನರಿ ವಾಸಿಸಲು ಯೋಗ್ಯವಲ್ಲದ ಸ್ಥಳದಲ್ಲಿ ವಾಸವಾಗಿದ್ದಾರೆ. ಅಂಥವರ ಕಣ್ಣಿರೊರೆಸಿ ಸೂರುಕೊಟ್ಟು ರಕ್ಷಣೆ ಮಾಡುವ ಕೆಲಸವಾಗಬೇಕಿದೆ ಎಂದರು.

ಸೂರಿಲ್ಲದವರಿಗೆ ಮನೆ ಕಟ್ಟಿಸಿ ರಾಮಮಂದಿರ ಅಂತ ಹೆಸರಿಡಿ. ಆಗ ನಿಜವಾದ ರಾಮ ಬಂದು ಆಶೀರ್ವಾದ ಮಾಡುತ್ತಾನೆ. ವೋಟಿನ ರಾಮ ಅಲ್ಲ, ಓಟಿಗಾಗಿ ಬಿಜೆಪಿ ರಾಮನ ಮಾಡುವುದು ಬೇಡ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

See also  ಅಮ್ಮನಿಗೆ ಬಳೆ ಮಾಡಿಸ್ತೀನಿ,ತಂಗಿಗೆ ಮದುವೆ ಮಾಡಿಸ್ತೀನಿ,ತಂದೆ ಕೈಯಿಂದಲೇ ಡ್ರೋನ್ ಹಾರಿಸ್ತೀನಿ: ಬಿಗ್‌ಬಾಸ್‌ ಮನೆಯಲ್ಲಿ ಭಾವುಕರಾಗಿ ಡ್ರೋನ್ ಪ್ರತಾಪ್ ಹೀಗಂದಿದ್ಯಾಕೆ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget