Uncategorized

ಅಧಿಕಾರ ದೊರೆತರೆ ಮತ್ತೆ ಜನಪರ ಆಡಳಿತ: ಸಿದ್ದರಾಮಯ್ಯ

ನ್ಯೂಸ್ ನಾಟೌಟ್: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕನಸು ಕಾಣುತ್ತಿದ್ದಾರೆ. ಸಿದ್ದು ಮತ್ತೆ ಸಿಎಂ ಆಗುವ ಬಗ್ಗೆ ಕಾಂಗ್ರೆಸ್ ನ ಬೆಂಬಲಿಗರು ಬ್ಯಾಟಿಂಗ್ ಮಾಡುತ್ತಿರುವ ಬೆನ್ನಲ್ಲಿಯೇ ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿ ಆಗುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ತಾವೇ ಪರೋಕ್ಷವಾಗಿ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತು ಬಹಿರಂಗ ಹೇಳಿಕೆಗಳು ಮುಂದುವರೆದಿದೆ. ಭಾನುವಾರ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಅವರು ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರೆ ಮಾಜಿ ಸಚಿವ ಎಚ್ .ಎಂ. ರೇವಣ್ಣ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ಸ್ಥಿತಿ ನಿರ್ಮಿಸೋಣ ಎಂದು ಹೇಳಿದ್ದಾರೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕರ ಹೇಳಿಕೆಗಳ ಬೆನ್ನಲ್ಲೇ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೊದಲ ಬಾರಿ ಮುಖ್ಯಮಂತ್ರಿ ಆಗಿ ಅಧಿಕಾರ ಕೊಟ್ಟಂತಹ ಸಂದರ್ಭದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ನಾನು ಶೋಷಿತ, ಹಿಂದುಳಿದ ವರ್ಗಗಳ ಪರ ಹೋರಾಟ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅಧಿಕಾರ ಸಿಕ್ಕರೆ ಇದೇ ರೀತಿಯ ಆಡಳಿತ ನೀಡುತ್ತೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

Related posts

26 ವರ್ಷಕ್ಕೆ 21 ಮದುವೆಯಾದ ಪುಣ್ಯಾತ್ಮ, ಪೊಲೀಸರ ಲಾಠಿ ಬಿಸಿಗೆ ಮದುವೆ ಪುರಾಣ ಬಾಯ್ಬಿಟ್ಟ!

ಮಹಾರಾಷ್ಟ್ರ ಕಿರಿಕ್ ಮಾಡಿದ್ರೆ ಈ ಹಳ್ಳಿಗಳೆಲ್ಲ ಕರ್ನಾಟಕದ ಪಾಲು..!

ಅಯೋಧ್ಯೆಯಲ್ಲಿ ಕಸದ ಗಾಡಿಯಲ್ಲಿ ರಾಷ್ಟ್ರಧ್ವಜ ವಿತರಣೆ