ದೇಶ-ವಿದೇಶರಾಜಕೀಯ

ಸಿಖ್ ಪೇಟ ತೊಟ್ಟು ಭಕ್ತರಿಗೆ ಪ್ರಸಾದ ಬಡಿಸಿದ ಮೋದಿ, ಗುರುದ್ವಾರದಲ್ಲಿ ವಿಶೇಷ ಪ್ರಾರ್ಥನೆ

ನ್ಯೂಸ್ ನಾಟೌಟ್: ಪ್ರಧಾನಿ ನರೆಂದ್ರ ಮೋದಿ (Narendra Modi) ಪಾಟ್ನಾದಲ್ಲಿ ಚುನಾವಣಾ ಪ್ರಚಾರದ ಎರಡನೇ ದಿನವಾದ ಇಂದು (ಮೇ 13) ಗುರುದ್ವಾರ ಪಾಟ್ನಾ ಸಾಹಿಬ್‍ಗೆ ಭೇಟಿ ನೀಡಿ ಗುರುದ್ವಾರದಲ್ಲಿ ಭಕ್ತರಿಗೆ ಪ್ರಸಾದ ಬಡಿಸಿದ್ದಾರೆ. ಸಾಂಪ್ರದಾಯಿಕ ಕುರ್ತಾ, ಕೇಸರಿ ಸಿಖ್ ಪೇಟ ಧರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಗುರುದ್ವಾರಕ್ಕೆ ಬಂದಿದ್ದ ಭಕ್ತರಿಗೆ ವಿಶೇಷ ಪ್ರಸಾದ ಬಡಿಸಿದ್ದಾರೆ. ನಂತರ ಗುರುದ್ವಾರದಲ್ಲಿ `ಕರಃ ಪ್ರಸಾದ’ವನ್ನು ತೆಗೆದುಕೊಂಡರು. ಈ ವೇಳೆ ಡಿಜಿಟಲ್ ಪಾವತಿ ವಿಧಾನ ಬಳಸಿ ಹಣ ಸಂದಾಯ ಮಾಡಿದರು.

ಇಂದು (ಮೆ.13) ಹಾಜಿಪುರ, ಮುಜಾಫರ್‍ಪುರ ಮತ್ತು ಸರನ್‍ನಲ್ಲಿ ಎನ್‍ಡಿಎ ಅಭ್ಯರ್ಥಿಗಳ ಪರ ಚುನಾವಣಾ ರ‍್ಯಾಲಿ ನಡೆಸಿ ಮೋದಿ ಮಾತನಾಡಲಿದ್ದಾರೆ. ಗುರು ಗೋಬಿಂದ್ ಸಿಂಗ್ ಅವರ ಜನ್ಮಸ್ಥಳವನ್ನು ಗುರುತಿಸಲು 18 ನೇ ಶತಮಾನದಲ್ಲಿ ಮಹಾರಾಜ ರಂಜಿತ್ ಸಿಂಗ್ ಈ ತಖತ್ ನಿರ್ಮಿಸಿದ. ಹತ್ತನೇ ಸಿಖ್ ಗುರುವಾದ ಗುರು ಗೋಬಿಂದ್ ಸಿಂಗ್ ಅವರು 1666 ರಲ್ಲಿ ಪಾಟ್ನಾದಲ್ಲಿ ಜನಿಸಿದರು. ಅವರು ಆನಂದಪುರ ಸಾಹಿಬ್‍ಗೆ ತೆರಳುವ ಮೊದಲು ಕೆಲವು ವರ್ಷಗಳ ಕಾಲ ಇಲ್ಲಿಯೇ ಕಳೆದಿದ್ದರು ಎನ್ನುವ ಉಲ್ಲೇಖಗಳಿವೆ.

Related posts

400 ವರ್ಷಗಳ ಹಳೇಯ ಈ ದೇಗುಲದಲ್ಲಿ ನಡೆಯುತ್ತಾ ಪವಾಡ..? 2 ಅಡಿ ಇದ್ದ ಹನುಮಂತನ ವಿಗ್ರಹ ಈಗ 12 ಅಡಿ ಆಗಿದ್ದೇಗೆ..?

ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳು ಬಚಾವದದ್ದೇಗೆ? ಭಾರತದ ಆ ಒಂದು ನಡೆಗೆ ಕತಾರ್ ತಲೆಬಾಗಿತಾ..?

ಕುಂಭಮೇಳದಲ್ಲಿ ಹಿಂದೂಯೇತರರಿಗೆ ಅಂಗಡಿ ತೆರೆಯಲು ಅವಕಾಶ ಇಲ್ಲ ಎಂದ ಎಬಿಎಪಿ..! ಈ ಬಗ್ಗೆ ಟ್ರಸ್ಟ್ ಅಧ್ಯಕ್ಷ ನೀಡಿದ ಕಾರಣಗಳೇನು..?