ಮಂಗಳೂರು

ಆದಿಚುಂಚನಗಿರಿ ಮಂಗಳೂರು ಶಾಖಾ ಮಠಕ್ಕೆ ರಜತ ಮಹೋತ್ಸವದ ಸಂಭ್ರಮ, ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ

ನ್ಯೂಸ್ ನಾಟೌಟ್: ಐತಿಹಾಸಿಕ ಹಿನ್ನೆಲೆಯುಳ್ಳ ತಲತಲಾಂತರದಿಂದ ಲಕ್ಷಾಂತರ ಭಕ್ತರಿಗೆ ಮಾರ್ಗದರ್ಶನ ನೀಡುತ್ತಾ ಬಂದಿರುವ ನಾಥ ಪಂಥದ ಧರ್ಮಪೀಠಗಳಲ್ಲಿ ಒಂದಾಗಿರುವ ಶ್ರೀ ಆದಿಚುಂಚನಗಿರಿ ಕ್ಷೇತ್ರ ಮಂಗಳೂರು ಶಾಖಾ ಮಠ ರಜತ ಮಹೋತ್ಸವದ ಸಂಭ್ರಮಕ್ಕೆ ಸಿದ್ಧವಾಗಿದೆ.
ಈ ಹಿನ್ನೆಲೆಯಲ್ಲಿ ಜ.1 ಹಾಗೂ ಜ.2 ರಂದು ಹಲವಾರು ಕಾರ್ಯಕ್ರಮಗಳನ್ನು ಮಠದಲ್ಲಿ ಆಯೋಜಿಸಲಾಗಿದೆ. ಜಗದ್ಗುರು ಶ್ರೀ ಡಾ. ನಿರ್ಮಲನಂದನಾಥ ಮಹಾಸ್ವಾಮೀಜಿ ಅವರಿಗೆ ಗುರುವಂದನ ಹಾಗೂ ರಜತಾ ತುಲಾಭಾರ ಕಾರ್ಯಕ್ರಮವೂ ನಡೆಯಲಿದೆ.

ಅಂದು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಿಯು ಕಾಲೇಜು ಕಟ್ಟಡ ಉದ್ಘಾಟನೆ ಮತ್ತು ಬಿಜಿಎಸ್ ಭವನಕ್ಕೆ ಶಂಕುಸ್ಥಾಪನೆ ನೆರವೇರಲಿದೆ. ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕಾವೂರಿನಿಂದ ಕಾಲೇಜಿನ ತನಕ ಕುಣಿತ ಭಜನೆ, ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ಸಾಗಲಿದೆ.

Related posts

ಮಂಗಳೂರು: ದನ ಕಳ್ಳತನ ಪ್ರಕರಣದಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನ, ಕಾರು ಮತ್ತು ಸ್ಕೂಟರ್‌ ಪೊಲೀಸ್ ವಶಕ್ಕೆ..!

ಬೆಳ್ತಂಗಡಿ: ಬಸ್ ​​​ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಝೀಮ್ ನಿಂದ ಕಿರುಕುಳ ಆರೋಪ, ಯುವತಿಯನ್ನು ಭೇಟಿ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿತ..! 7 ಮಂದಿಗೆ ಗಾಯ