ಕ್ರೀಡೆ/ಸಿನಿಮಾ

ಬಾಲರಾಮನ ಪ್ರತಿಷ್ಠಾಪನೆ ವೇಳೆ ರಾಮನಾಮ ಜಪಿಸುವಂತೆ ಗಾಯಕಿ ಕರೆ; ಕೆ.ಎಸ್​. ಚಿತ್ರಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ,ನೆಟ್ಟಿಗರು ಹೇಳಿದ್ದೇನು?

ನ್ಯೂಸ್ ನಾಟೌಟ್‌ :  ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದೆ.ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದ ಕಣ್ಣುಗಳಿಂದ ಕಾಯುತ್ತಿದ್ದಾರೆ. ಈಗಾಗ್ಲೇ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು,ಸಾವಿರಾರು ಮಂದಿ ಇದಕ್ಕಾಗಿ ಹಗಲಿರುಳು ಎನ್ನದೇ ಪ್ರಯತ್ನ ಮಾಡುತ್ತಿದ್ದಾರೆ.ಇತ್ತ ಖ್ಯಾತ ಗಾಯಕಿ ಕೆ.ಎಸ್​. ಚಿತ್ರಾ ಅವರು ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಜನರು ರಾಮನಾಮ ಜಪಿಸಿ ದೀಪಗಳನ್ನು ಬೆಳಗಿಸುವಂತೆ ಮನವಿ ಮಾಡಿದ್ದಾರೆ.

ಗಾಯಕಿ ಚಿತ್ರಾ ಅವರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಬೆಂಬಲಿಸುವಂತೆ ಕರೆ ನೀಡಿರುವ ವಿಡಿಯೊಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಚಿತ್ರಾ ಅವರ ಹೇಳಿಕೆಯನ್ನು ಟೀಕಿಸಿದ್ದು, ಕೆಟ್ಟದಾಗಿ ಕಾಮೆಂಟ್​ ಮಾಡಿದ್ದಾರೆ.ಜನವರಿ 22 ರಂದು ಮಧ್ಯಾಹ್ನ 12:20 ಕ್ಕೆ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದಾಗ, ಪ್ರತಿಯೊಬ್ಬರೂ ‘ಶ್ರೀರಾಮ, ಜಯ ರಾಮ, ಜಯ ಜಯ ರಾಮ’ ಎಂಬ ಮಂತ್ರವನ್ನು ಪಠಿಸಬೇಕು. ಹಾಗೆಯೇ ಸಂಜೆಯ ವೇಳೆ ಮನೆಯ ಎಲ್ಲಾ ಭಾಗಗಳಲ್ಲಿ ಐದು ಬತ್ತಿಯ ದೀಪಗಳನ್ನು ಹಚ್ಚಬೇಕು. ದೇವರ ಆಶೀರ್ವಾದ ಎಲ್ಲರಿಗೂ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಲೋಕಾ ಸಮಸ್ತಾ ಸುಖಿನೋ ಭವಂತು ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ಇತ್ತ ಚಿತ್ರಾ ಅವರ ಪೋಸ್ಟ್​ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಅವರನ್ನು ಬೆಂಬಲಿಸಿ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಸುರೇಂದ್ರನ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಅಯೋಧ್ಯೆ ಪ್ರಾಣ ಪ್ರತಿಷ್ಠಾ ದಿನದಂದು ದೀಪ ಬೆಳಗಿಸುವಂತೆ ಮನವಿ ಮಾಡಿದ ಗಾಯಕಿ ಚಿತ್ರಾ ಅವರ ಮೇಲೆ ಎಡ-ಜಿಹಾದಿ ಗುಂಪುಗಳು ಸೈಬರ್ ದಾಳಿ ನಡೆಸಿವೆ.

ಕೇರಳದಲ್ಲಿ ಪಿಣರಾಯಿ ವಿಜಯನ್ ಆಳ್ವಿಕೆಯಲ್ಲಿ ಒಬ್ಬ ಹಿಂದೂ ತನ್ನ ನಂಬಿಕೆಗಳನ್ನು ಸಹ ಅನುಯಾಯಿಗಳೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕೃತ್ಯದ ಬಗ್ಗೆ ಕಾಂಗ್ರೆಸ್ ಮೌನವಾಗಿರುವುದು ನಾಚಿಕೆಗೇಡಿನ ಸಂಗತಿ.ನಾವು ಕೇರಳ ಬಿಜೆಪಿ ಕೆಎಸ್ ಚಿತ್ರಾ ಅವರ ಅಚಲ ಬೆಂಬಲಕ್ಕೆ ನಿಂತಿದ್ದೇವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಗಾಯಕ ವೇಣುಗೋಪಾಲ್​, ನನ್ನ ಮತ್ತು ಚಿತ್ರ ಅವರದ್ದು 50 ವರ್ಷಗಳ ಹಳೆಯ ಸ್ನೇಹ. ಆಕೆ ಅದ್ಬುತ ಗಾಯಕಿ, ಆಕೆಯನ್ನು ಟೀಕಿಸಿ ಹಲವರು ಆನ್​ಲೈನ್​ನಲ್ಲಿ ಕಮೆಂಟ್​ ಮಾಡಿರುವುದು ನನಗೆ ನೋವುಂಟು ಮಾಡಿದೆ. ನೀವು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದರೆ ದಯವಿಟ್ಟು ಅದನ್ನು ಪ್ರಯತ್ನಿಸಿ ಮತ್ತು ನೋಯಿಸಬೇಡಿ ಎಂದು ಮನವಿ ಮಾಡಿದ್ದಾರೆ.

Related posts

ಪತ್ನಿ ಆಡಿದ ಮಾತನ್ನು ನೆನೆದು ಕಣ್ಣೀರಿಟ್ಟ ನಿರ್ಮಾಪಕ ರವೀಂದರ್​ ಚಂದ್ರಶೇಖರ್! ,ಕಾರಣವೇನು?

ಕಬಡ್ಡಿ, ವಾಲಿಬಾಲ್ ನಲ್ಲಿ ಮಿಂಚಿದ ಸಂಪಾಜೆ ಪ್ರೌಢ ಶಾಲೆ ವಾಲಿಬಾಲ್ ಕೂಟದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಲಗ್ಗೆ ಇಟ್ಟ ಸಂಪಾಜೆ ಪ.ಪೂ ಕಾಲೇಜು

‘ಕಾಶ್ಮೀರ ಫೈಲ್ಸ್‌’, ‘ಕೇರಳ ಸ್ಟೋರಿ’ ಬಳಿಕ ಬರುತ್ತಿದೆ ‘ಕರಾವಳಿ ಸ್ಟೋರಿ’..! ದಕ್ಷಿಣ ಕನ್ನಡದಲ್ಲಿ ಹಿಂದೂ-ಮುಸ್ಲಿಂ ಸಂಘರ್ಷದ ಕಥೆಯುಳ್ಳ ಸಿನಿಮಾ ಶೀಘ್ರ ತೆರೆಗೆ