ನ್ಯೂಸ್ ನಾಟೌಟ್ : ಧರ್ಮಸ್ಥಳ ಪ್ರಕರಣದ ರಸಹ್ಯವನ್ನು ಪತ್ತೆ ಹಚ್ಚಲು ನೇತ್ರಾವತಿ ಸ್ನಾನಘಟ್ಟದ ಬಳಿ ಎಸ್ಐಟಿ ಫೀಲ್ಡ್ಗೆ ಇಳಿದಿದೆ. ಬುರುಡೆ ರಹಸ್ಯ ಕ್ಕಾಗಿ ಅನಾಮಿಕ ವ್ಯಕ್ತಿಯನ್ನು ಕರೆತಂದು ಸ್ಥಳ ಮಹಜರು ಪ್ರಕ್ರಿಯೆ ನಡೆಯುತ್ತಿದೆ.. ದೂರುದಾರ ಮಣ್ಣು ಮಾಡಿದ್ದಾನೆ ಎನ್ನಲಾಗಿರುವ ಸ್ಥಳದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.
ಸತತವಾಗಿ ಎರಡು ದಿನಗಳ ವಿಚಾರಣೆ ಬಳಿಕ 3ನೇ ದಿನವಾದ ಇಂದು ಅನಾಮಿಕ ವ್ಯಕ್ತಿಯನ್ನು ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದಾರೆ. ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಹಾಗೂ FSL ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ. ಆ ಜಾಗದಲ್ಲಿ ಯಾವುದಾದರೂ ಕಳೆಬರ ಸಿಗುತ್ತಾ ಎಂದು ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಸದ್ಯ 3ನೇ ದಿನವಾದ ಇಂದು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಅನಾಮಿಕನ ಜತೆ ಎಸ್ಐಟಿ ಅಧಿಕಾರಿಗಳು ಹಾಗೂ FSL ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.