ಕ್ರೈಂರಾಜ್ಯ

ಶಾಸಕ ಮುನಿರತ್ನ ಮನೆ ಮೇಲೆ ಎಸ್‌ಐಟಿ ದಾಳಿ, ನ್ಯಾಯಾಂಗ ಬಂಧನದಲ್ಲಿರುವಾಗಲೇ ಬಿಗ್‌ ಶಾಕ್‌

ನ್ಯೂಸ್‌ ನಾಟೌಟ್‌: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸವಾಲು ಎದುರಾಗಿದೆ.

ಶನಿವಾರ ಬೆಳ್ಳಂಬೆಳಗ್ಗೆ ಮುನಿರತ್ನ ಅವರ ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್​ಎಸ್​​ಎಲ್ ತಂಡದ ಜತೆಗೆ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related posts

ನಟ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ, ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶಿವಣ್ಣ

ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ದರ ಪರಿಷ್ಕರಣೆ ಇಲ್ಲ ಎಂದ ಕೆಎಂಎಫ್..! ಏನಿದು ವದಂತಿ..?

ಪ್ರಜ್ವಲ್‌ ರೇವಣ್ಣ ಬಗ್ಗೆ ಶಾಸಕಿ ನಯನಾ ಮೋಟಮ್ಮ ಹೇಳಿದ್ದೇನು..? ಮನೋವೈದ್ಯರನ್ನು ನೇಮಿಸಿ ಎಂದದ್ದೇಕೆ..?