ನ್ಯೂಸ್ ನಾಟೌಟ್: SNDP ಯೋಗಂ ಕೊಡಗು ಯೂನಿಯನ್, ಸಿದ್ದಾಪುರ ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಮತ್ತು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇವುಗಳ ಸಹಯೋಗದಲ್ಲಿ ಮೇ 18 ರಂದು ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.
ಶಿಬಿರದಲ್ಲಿ ಕೆವಿಜಿ ಆಯುರ್ವೇದ ಮತ್ತು ಕೆವಿಜಿ ಮೆಡಿಕಲ್ ಕಾಲೇಜಿನ ನುರಿತ ವೈದ್ಯರು ಉಪಸ್ಥಿತರಿದ್ದರು. ಪರಿಸರದ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.