ಮಡಿಕೇರಿ: ತಾಯಿ, ಮಗನಿಗೆ ಗುಂಡಿಕ್ಕಿದ ವ್ಯಕ್ತಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ. ಮಗ ಮಧು(42) ಸಾವಿಗೀಡಾಗಿದ್ದು ತಾಯಿ ಯಶೋಧಾ ಸ್ಥಿತಿ ಗಂಭೀರವಾಗಿದೆ. ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿ ಆಲೆಮಾಡ ಸಾಗರ್(52) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶೂಟ್ ಮಾಡಿದ ಬಳಿಕ ಆರೋಪಿ ಸಾಗರ್ ಸಮೀಪದ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆ ಮಾಡಿದ್ದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.