ಕ್ರೈಂಬೆಂಗಳೂರುವೈರಲ್ ನ್ಯೂಸ್

ಸೋನು ಶ್ರೀನಿವಾಸ್ ಗೌಡ ಬಂಧನ..! ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕೊಟ್ಟ ದೂರಿನಲ್ಲೇನಿದೆ..?

163

ನ್ಯೂಸ್ ನಾಟೌಟ್: ಬಿಗ್‌ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಆಕೆಯನ್ನು ಶುಕ್ರವಾರ(ಮಾ.22) ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಟ್ರೋಲ್ ಆಗುತ್ತಾ ಸುದ್ದಿಯಲ್ಲಿ ಇರುತ್ತಿದ್ದ ಸೋನು ದಿಢೀರನೆ ಪೊಲೀಸರ ಅತಿಥಿಯಾಗಿದ್ದಾರೆ. ಅದಕ್ಕೆ ಕಾರಣ ಆಕೆಯ ಪ್ರಚಾರದ ಹುಚ್ಚು ಎನ್ನಲಾಗಿದೆ. ಸೋನು ಗೌಡ ಜನಪ್ರಿಯತೆಗಾಗಿ ಚಿತ್ರ ವಿಚಿತ್ರ ಪೋಸ್ಟ್‌ಗಳನ್ನು ಮಾಡುತ್ತಿರುತ್ತಾರೆ. ಎಷ್ಟೇ ಟ್ರೋಲ್ ಆದರೂ ಕ್ಯಾರೆ ಎನ್ನದೇ ಹಾಟ್ ಹಾಟ್ ಫೋಟೊ, ವಿಡಿಯೋ ತೇಲಿಬಿಡುತ್ತಿದ್ದರು. ಇಷ್ಟೇ ಆಗಿದ್ದರೆ ಪರವಾಗಿಲ್ಲ.

ಇತ್ತೀಚೆಗೆ ಆಕೆ ಮಗುವನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಈ ಸಂಬಂಧ ಪೋಸ್ಟ್ ಕೂಡ ಮಾಡಿದ್ದರು. ಸಾಕಷ್ಟು ಜನ ಆಕೆಯ ನಡೆಗೆ ಮೆಚ್ಚುಗೆ ಸೂಚಿಸಿದ್ದರು. ಸೋನು ಕಾನೂನು ಬಾಹಿರವಾಗಿ ಮಗು ದತ್ತು ಪಡೆದಿದ್ದಾರೆ ಎನ್ನುವ ಆರೋಪದಡಿ ಆಕೆಯನ್ನು ಬಂಧಿಸಲಾಗಿದೆ. ಈ ಬಗ್ಗೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು ಎಂದು ವರದಿ ತಿಳಿಸಿದೆ. ಈ ಸಂಬಂಧ ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

See also  ಟೆಕ್ಕಿಯೊಬ್ಬ 8 ದಿನಗಳಿಂದ ನಿಗೂಢ ನಾಪತ್ತೆ..! ಹುಡುಕಿಕೊಡುವಂತೆ 'ಎಕ್ಸ್'​ ಮೂಲಕ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ ಪತ್ನಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget