ಕ್ರೈಂವೈರಲ್ ನ್ಯೂಸ್

ಸೋನು ಗೌಡಗೆ ಜೈಲು..! 14 ದಿನ ನ್ಯಾಯಾಂಗ ಬಂಧನ..!

245

ನ್ಯೂಸ್ ನಾಟೌಟ್: ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಬಿಗ್ ಬಾಸ್ ಸ್ಪರ್ಧಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.

ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು.

ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು. ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ನಿನ್ನೆ ಬೆಂಗಳೂರಿಗೆ ತೆರಳಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್ ೧೪ ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

See also  ಪಾಳು ಮನೆಯೊಂದರಲ್ಲಿ ಅಸ್ಥಿಪಂಜರಗಳು ಪತ್ತೆಯಾದದ್ದೆಲ್ಲಿ..? ಸ್ಥಳೀಯರು ಈ ಬಗ್ಗೆ ಹೇಳಿದ್ದೇನು..? ಏನಿದು ನಿಗೂಢಯ ರಹಸ್ಯ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget