ಕ್ರೈಂಬೆಂಗಳೂರುವೈರಲ್ ನ್ಯೂಸ್

ಸೋನು ಗೌಡಗೆ ಇಂದು(ಎ.5) ಜೈಲಿನಿಂದ ಬಿಡುಗಡೆ, 1 ಲಕ್ಷ ರೂಪಾಯಿಯ ಬಾಂಡ್ ನೀಡಲು ಸೂಚನೆ

ನ್ಯೂಸ್ ನಾಟೌಟ್: ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಎ.4) ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗಾಗಿ ಜೈಲಿನಿಂದ ಇಂದು(ಎ.5) ಸೋನು ಬಿಡುಗಡೆ ಆಗಲಿದ್ದಾರೆ ಎಂದು ವರದಿ ತಿಳಿಸಿದೆ.

ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು. ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.

ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು ಸೋನು ಗೌಡ. ಕೊನೆಗೆ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು. ನಂತರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಈಗ ಬಿಡುಗಡೆಯ ಭಾಗ್ಯ ದೊರೆತಿದೆ.

Related posts

ತೊಡಿಕಾನ: ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಹಠಾತ್ ಆಗಿದ್ದೇನು..?

ಈ ಒಂದು ಮೀನು ರೂ.20 ಸಾವಿರಕ್ಕೆ ಮಾರಾಟ..! ಬಲೆಗೆ ಬೀಳುವ ಮೊದಲೇ ಗ್ರಾಹಕರಿಂದ ಈ ಮೀನಿಗಾಗಿ ಅಡ್ವಾನ್ಸ್‌ ಪಾವತಿ! ಅಂಥದ್ದೇನಿದೆ ಈ ಮೀನಿನಲ್ಲಿ..?

ಶರಣಾಗತಿಯಾದ ನಕ್ಸಲ್ ಲತಾ ಟೀಂನಲ್ಲಿದ್ದ ರವೀಂದ್ರ ಮಿಸ್ಸಿಂಗ್..? ವಿಕ್ರಂಗೌಡ ಎನ್‍ ಕೌಂಟರ್ ಬಳಿಕ ಟೀಂ ತೊರೆದಿದ್ದ ರವೀಂದ್ರ ನಾಪತ್ತೆ..!