Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಸೌದಿ ಏರ್‌ ಲೈನ್ಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ತುರ್ತು ಭೂಸ್ಪರ್ಶ..! ಟೈಯರ್‌ ನಿಂದ ಚಿಮ್ಮಿದ ಬೆಂಕಿ, ದಟ್ಟ ಹೊಗೆ..!

659

ನ್ಯೂಸ್ ನಾಟೌಟ್: ಅಹಮದಾಬಾದ್‌ ನಲ್ಲಿ ವಿಮಾನ ದುರಂತ ಘಟನೆ ಸಂಭವಿಸಿದ ಬಳಿಕ ಇತರೇ ವಿಮಾನಗಳಲ್ಲೂ ಒಂದಿಲ್ಲೊಂದು ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ವರದಿಯಾಗುತ್ತಿದೆ. ಅದೇ ರೀತಿ ಹಜ್‌ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್‌ ಲೈನ್ಸ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನ ಚಕ್ರಗಳು ರನ್‌ ವೇಗೆ ಇಳಿಯುತ್ತಿದ್ದಂತೆ ಟೈಯರ್‌ ನಿಂದ ಬೆಂಕಿ ಕಿಡಿಗಳು ಚಿಮ್ಮಿದ್ದು, ದಟ್ಟ ಹೊಗೆ ಹೊಮ್ಮಿದೆ. ಅದೃಷ್ಟವಶಾತ್‌ ಯಾವುದೇ ದುರಂತ ಸಂಭವಿಸದೇ ನೂರಾರು ಯಾತ್ರಿಕರು, ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಕೂಡ ವೈರಲ್‌ ಆಗಿದೆ.

ಮೂಲಗಳ ಪ್ರಕಾರ, SV3112 ಸಂಖ್ಯೆಯ ವಿಮಾನ ಶನಿವಾರ ರಾತ್ರಿ 10:45ಕ್ಕೆ ಜೆಡ್ಡಾದಿಂದ 250 ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿತ್ತು. ಹಜ್‌ ಗೆ ಹೊರಟಿದ್ದ ವೇಳೆ ಬೆಳಗ್ಗೆ 6:30ರ ಸುಮಾರಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ವಿಮಾನದ ಟೈಯರ್‌ನಿಂದ ಬೆಂಕಿಯ ಕಿಡಿಗಳು ಚಿಮ್ಮಿದೆ ಜೊತೆಗೆ ಟೈರ್‌ನಿಂದ ದಟ್ಟ ಹೊಗೆ ಬಂದಿದೆ. ಕೇವಲ 20 ನಿಮಿಷಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ಪುತ್ತೂರು: ಆತ್ಮಹತ್ಯೆ ಮಾಡಿಕೊಂಡ 7 ತಿಂಗಳ ಗರ್ಭಿಣಿ..! ಪ್ರಕರಣ ದಾಖಲು..!

ಇಸ್ರೇಲ್-ಇರಾನ್ ನಡುವಿನ ಸಂಘರ್ಷದಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳು..! ಕರ್ನಾಟಕದ 9 ವಿದ್ಯಾರ್ಥಿಗಳನ್ನು ಕರೆತರಲು ವಿದೇಶಾಂಗ ಸಚಿವರಿಗೆ ಪತ್ರ..!

See also  50 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ An-24 ವಿಮಾನ ದಿಢೀರ್‌ ಕಣ್ಮರೆ..!, ಹಾರಾಟದ ನಡುವೆಯೇ ವಾಯು ಸಂಚಾರ ನಿಯಂತ್ರಕರ ಸಂಪರ್ಕ ಕಡಿತ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget