ಕರಾವಳಿಸುಳ್ಯ

ಸೌಜನ್ಯ ಕೇಸ್ : ಪುತ್ತೂರಿನಲ್ಲಿ ‘ಪುತ್ತಿಲ ಪರಿವಾರ’ ವತಿಯಿಂದ ಬೃಹತ್ ಪ್ರತಿಭಟನೆ , 1 ಗಂಟೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ವ್ಯಾಪಾರಸ್ಥರಲ್ಲಿ ಮನವಿ

236

ನ್ಯೂಸ್ ನಾಟೌಟ್ : ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸೌಜನ್ಯ ಪ್ರಕರಣಕ್ಕೆ ಇನ್ನು ನ್ಯಾಯ ಸಿಕ್ಕಿಲ್ಲ.ಹೀಗಾಗಿ ಸರ್ಕಾರ ಮರುತನಿಖೆ ಕೈಗೊಂಡು ನೈಜವಾದ ಆರೋಪಿಗಳನ್ನು ಪತ್ತೆ ಮಾಡಿ ಅವರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಪುತ್ತಿಲ ಪರಿವಾರದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.ಆ.೧೪ರಂದು ಈ ಪ್ರತಿಭಟನೆ ನಡೆಯಲಿದ್ದು ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದ್ದು,ಆಗಸ್ಟ್ 8 ರಂದು ಪುತ್ತಿಲ ಪರಿವಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು. ಹಲವು ಗಣ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು,ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯ ಮಾಡಲಾಗುವುದು.

ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ಸರಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಮೂಲಕ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ತಿಳಿದಯು ಬಂದಿದೆ.

ಸೌಜನ್ಯ ಹಾಗೂ ಆಕೆ ಕುಟುಂಬಸ್ಥರಿಗೆ ನ್ಯಾಯ ಸಿಗುವ ಉದ್ದೇಶದಿಂದ ಪೂರ್ವಭಾವಿ ಸಭೆಯಲ್ಲಿ ನಡೆಸಿದ್ದು, ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ , ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ, ಪ್ರಮುಖರಾದ ಸುನೀಲ್ ಬೋರ್ಕರ್, ರವಿ ಕುಮಾರ್ ಕೆದಂಬಾಡಿ ಮಠ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣಪ್ರಸಾದ್ ಶೆಟ್ಟಿ, ಚಂದ್ರಹಾಸ್ ಈಶ್ವರಮಂಗಲ, ಪ್ರೇಮ್ ರಾಜ್ ಆರ್ಲಪದವು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಅಲ್ಲಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿವೆ.ಕೊಲೆ ಹಂತಕರು ಯಾರು ಎನ್ನುವ ಪ್ರಶ್ನೆ ಬುಗಿಲೆದ್ದಿದ್ದು, ಸರಿಯಾದ ಕ್ರಮದಲ್ಲಿ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಅವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿವೆ.ಕೇವಲ ದ.ಕ ಜಿಲ್ಲೆ ಮಾತ್ರವಲ್ಲ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಈ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ.

ಇದೀಗ ಪುತ್ತೂರಿನಲ್ಲಿಯೂ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತಿಲ ಪರಿವಾರದ ವತಿಯಿಂದ ಪ್ರತಿಭಟನೆ ನಡೆಯಲಿದ್ದು, ಪುತ್ತೂರು ಪೇಟೆಯ ವರ್ತಕರು ಸೌಜನ್ಯಳ ಸಾವಿಗೆ ನ್ಯಾಯಕ್ಕಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಅಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್ ಮಾಡುವಂತೆ ಪುತ್ತಿಲ ಪರಿವಾರ ವತಿಯಿಂದ ಪುತ್ತೂರಿನ ಸಮಸ್ತ ವ್ಯಾಪಾರಸ್ಥರಲ್ಲಿ ಮನವಿಯನ್ನು ಮಾಡಲಾಗಿದೆ.

See also  ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್​ಗಳ ಕಣ್ಣು!ಮಂಗಳೂರಿನಲ್ಲಿ ಸೈಬರ್ ತಜ್ಞರು ಹೇಳಿದ್ದೇನು?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget