ದೇಶ-ಪ್ರಪಂಚ

ದಕ್ಷಿಣ ಕಾಶ್ಮೀರ: ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶೋಪಿಯಾನ್ ನ ಕಿಲ್ಬಾಲ್ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ‘ಶೋಧನಾ ಕಾರ್ಯಾಚರಣೆಯ ಸಮಯದಲ್ಲಿ, ಜಂಟಿ ಶೋಧ ತಂಡವು ಶಂಕಿತ ಸ್ಥಳದ ಕಡೆಗೆ ಸಾಗುತ್ತಿದ್ದಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಜಂಟಿ ಶೋಧ ತಂಡದ ಮೇಲೆ ಮನಬಂದಂತೆ ಗುಂಡು ಹಾರಿಸಿದರು, ಇದು ಎನ್ ಕೌಂಟರ್ ಗೆ ಕಾರಣವಾಯಿತು ಎಂದು ಹೇಳಿದರು.

Related posts

ಗೋ ಹತ್ಯೆ ಮಾಡಿದ್ರೆ ಸರ್ಕಲ್‌ ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದ ಕಾಂಗ್ರೆಸ್ ಸಚಿವ..! ಮಂಕಾಳ ವೈದ್ಯ ಖಡಕ್ ಎಚ್ಚರಿಕೆ..!

ಕಪ್ಪು ಪಟ್ಟಿ ಇರುವ ಅಪರೂಪದ ಬ್ಲಾಕ್ ಟೈಗರ್ಸ್​ ಕಂಡಿದ್ದೀರಾ? ಅಪರೂಪ ತಳಿಯ ಹುಲಿಗಳ ಓಡಾಟ ದೃಶ್ಯಗಳು ಕ್ಯಾಮಾರಾದಲ್ಲಿ ಸೆರೆ

ರಾತ್ರೋ ರಾತ್ರಿ ಸೆಲೆಬ್ರಿಟಿಯಾದ ರಾನು ಮಂಡಲ್ ಸಿನಿಮಾ ಶೀಘ್ರದಲ್ಲೇ ತೆರೆಗೆ