ಕರಾವಳಿಕ್ರೈಂವೈರಲ್ ನ್ಯೂಸ್

ಸೌಜನ್ಯ ಪ್ರಕರಣದ ಕುರಿತು ಇಂದು ಹೈಕೋರ್ಟ್ ತೀರ್ಪು..! ಮರುತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶನ ನೀಡಲಿದೆಯಾ ಕೋರ್ಟ್? ಅರ್ಜಿ ಸಲ್ಲಿಸಿದವರ್ಯಾರು?

275

ನ್ಯೂಸ್ ನಾಟೌಟ್ : ಬಳಿಕ ಸೌಜನ್ಯ ಪರ ಪ್ರತಿಭಟನೆಯ ಜೋರಾಗಿ, ಸರ್ಕಾರವು ಈ ಪ್ರಕರಣವನ್ನು ಮರುತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಒತ್ತಡ ಜೋರಾಗಿತ್ತು, ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿತ್ತು.

ನಿಜವಾದ ಅಪರಾಧಿಗಳನ್ನು ಬಂಧಿಸಬೇಕು, ತನಿಖೆಯ ಆರಂಭದಲ್ಲಿ ಲೋಪ ಎಸಗಿರುವ ತನಿಖಾಧಿಕಾರಿ ಮತ್ತು ವೈದ್ಯಾಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತವಾಗುತ್ತಿದೆ. ಈ ಮಧ್ಯೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಸರಕಾರಕ್ಕೆ ಮನವಿ ಮಾಡಲಾಗಿದೆ.

ಈ ಮಧ್ಯೆ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೆ.8ರಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಲಿದ್ದಾರೆ.

ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಸೌಜನ್ಯ ಪ್ರಕರಣ ಸಂಬಂಧಿಸಿದಂತೆ ಉಜಿರೆ ಕಾಲೇಜು ವಿದ್ಯಾರ್ಥಿನಿ ಕು.‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರ್ಕಾಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ನಡೆಯಲಿದ್ದು ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ ನೆಟ್ಟಿದೆ.

See also  ಸುಳ್ಯ:ದ್ವಿಚಕ್ರ ವಾಹನಗಳ ನಡುವೆ ಅಪಘಾತ!ಸವಾರ ಆಸ್ಪತ್ರೆಗೆ ದಾಖಲು, ಪಕ್ಕದಲ್ಲಿದ್ದ ಒಮಿನಿ ಜಖಂ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget