ನ್ಯೂಸ್ ನಾಟೌಟ್ : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಮಾ.9 ರಂದು ಸಭೆ ನಡೆಸಲು ಸೌಜನ್ಯ ಪರ ಸಾಹಿತಿ, ಚಿಂತಕ, ಪತ್ರಕರ್ತರು, ಹೋರಾಟಗಾರರ ಸಮಾಲೋಚನಾ ಸಭೆಯನ್ನು ಕೊನೇ ಕ್ಷಣದಲ್ಲಿ ಸಭಾಂಗಣದ ಅನುಮತಿಯನ್ನು ರದ್ದುಗೊಳಿಸಿದ್ದರಿಂದ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗಧಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ ಸಾಹಿತ್ಯ ಪರಿಷತ್ ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾ.8ರಂದು ಸಂಘಟಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕೇರಳ: ಪೊಲೀಸರ ತಪಾಸಣೆಯ ವೇಳೆ ಮಾದಕ ದ್ರವ್ಯಗಳ ಪ್ಯಾಕೇಟ್ ಗಳನ್ನು ನುಂಗಿದ್ದಆರೋಪಿ..! 28 ವರ್ಷದ ವ್ಯಕ್ತಿ ಸಾವು..!