ಕರಾವಳಿಕ್ರೈಂಸುಳ್ಯ

ಸೌಜನ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭ..ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಭಾಗಿ

245

ನ್ಯೂಸ್ ನಾಟೌಟ್ : ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(8/ಆಗಸ್ಟ್) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ.

ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು ೧೧ ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು.

https://www.youtube.com/watch?v=-rzfX_xrbaM

ಸೌಜನ್ಯ ನ್ಯಾಯದ ಹೋರಾಟದಲ್ಲಿ ನಾವೆಲ್ಲರು ಪಕ್ಷಾತೀತ, ಜ್ಯಾತ್ಯಾತೀತ, ಧರ್ಮಾತೀತವಾಗಿ ನಿಂತಿದ್ದೇವೆ, ಯಾವುದೇ ಧಾರ್ಮಿಕ ಕ್ಷೇತ್ರದ ವಿರುದ್ಧ ನಮ್ಮ ಹೋರಾಟವಲ್ಲ. ನಾವು ಸೌಜನ್ಯಳಿಗೆ ನ್ಯಾಯ ಸಿಗಬೇಕು ಅನ್ನುವುದಷ್ಟೇ ನಮ್ಮ ಒತ್ತಾಯ ಮಾಡಲಾಗಿತ್ತು.

ಇಂದು ಮಹೇಶ್ ಶಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸೇರಿಸಿಕೊಂಡು ಬೆಳಗ್ಗೆ ೯ ಗಂಟೆಗೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ. ಸುಮಾರು 500ಕ್ಕೂ ಹೆಚ್ಚು ಬೈಕ್, ಕಾರು ವಾಹನಗಳು ಜಾಥಾದಲ್ಲಿ ಪಾಲ್ಗೊಳ್ಳುತ್ತಿದ್ದು, ಸುಳ್ಯ ಪೇಟೆಯಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮಂದಿ ನ್ಯಾಯಪರ ಹೋರಾಟಗಾರರು ಸಂಘಟಿತರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

https://www.youtube.com/watch?v=-rzfX_xrbaM
See also  ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಎಂದದ್ದೇಕೆ ವಿಜಯೇಂದ್ರ..? ಏನಿದು ನೂತನ ಬಿಜೆಪಿ ರಾಜ್ಯಾಧ್ಯಕ್ಷನ ಗಂಭೀರ ಆರೋಪ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget