ಕರಾವಳಿರಾಜಕೀಯ

ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಹೆಸರು ಅಂತಿಮ? ಖಾದರ್ ಗೆ ಕರೆ ಮಾಡಿ ಸುರ್ಜೇವಾಲಾ ಹೇಳಿದ್ದೇನು?

ನ್ಯೂಸ್ ನಾಟೌಟ್ :  ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಸದ್ಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು ಟಿ ಖಾದರ್ ಅವರನ್ನು ವಿಧಾನ ಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ. 

ಇದೀಗ ಅಚ್ಚರಿಯ ರೀತಿಯಲ್ಲಿ ಯು.ಟಿ ಖಾದರ್ ಹೆಸರು ಅಂತಿಮವಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಸ್ಪೀಕರ್ ಸ್ಥಾನ ಒಪ್ಪುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ನೀವು ಇದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದಕ್ಕೆ ಖಾದರ್ ಒಪ್ಪಿಗೆ ಸೂಚಿಸಿದ್ದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು  ಕೆಪಿಸಿಸಿ ಅಧ್ಯಕ್ಷ , ಡಿಸಿಎಂ  ಡಿ ಕೆ ಶಿವಕುಮಾರ್  ಅವರ ಜೊತೆಗೂ ಖಾದರ್ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. 

ಮಂಗಳವಾರ 11. 30ಕ್ಕೆ ಯು ಟಿ  ಖಾದರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ  ಡಿ ಕೆ ಶಿವಕುಮಾರ್  ಅವರು ನಾಮಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ. 

Related posts

ಭಾರತೀಯ ಕೋಸ್ಟ್ ಗಾರ್ಡ್ ಗೆ ಸೇರಿದ ಹೆಲಿಕಾಪ್ಟರ್ ಪತನ..! 3 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ, ಗುರುತು ಪತ್ತೆಗೆ ಮನವಿ

ಎರಡು ಸುತ್ತು ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಮುನ್ನಡೆ?