ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ನ.22) ಅಪೌಷ್ಟಿಕ ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಉದ್ಘಾಟಿಸಿದರು. ಕರ್ನಾಟಕ ಸರ್ಕಾರ ದ.ಕ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಶಿಬಿರ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ| ಸಿ. ರಾಮಚಂದ್ರ ಭಟ್ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ವೇಳೆ ಕಾಲೇಜಿನ ಡೀನ್ ಡಾ| ನೀಲಾಂಬಿಕೈ ನಟರಾಜನ್, ಡಾ| ಸುಬ್ರಹ್ಮಣ್ಯ, ಪ್ರಭಾರ ಸಿ.ಡಿ.ಪಿ.ಒ ಶೈಲಜ ಬಿ ಮತ್ತು ತಂಡ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ಪುಟಾಣಿ ಮಕ್ಕಳ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನೆರವೇರಿಸಲಾಯಿತು.

Related posts

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಸ್ಕೃತ ಸಂಭಾಷಣ ಶಿಬಿರ ಸಮಾರೋಪ, ಸಂಸ್ಕೃತ ವ್ಯಾಕರಣ, ಸಂಭಾಷಣೆ ಕುರಿತು ಸಮಗ್ರ ಮಾಹಿತಿ

ದೀಪಾವಳಿ- ದೀಪಗಳ ಹಬ್ಬ-; ಮನೆ ಮನ ಬೆಳಗುವ ಹಬ್ಬ