Latest

ಸುಳ್ಯ:ಕೆವಿಜಿ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ, ‘ಭಾರತೀಯ ಉತ್ತರಾಧಿಕಾರ ಕಾಯ್ದೆ- 1925’ ವಿಷಯವಾಗಿ ಮಾಹಿತಿ

451

ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಅಡಿಯಲ್ಲಿ ಕಾಲೇಜಿನ ಕಾನೂನು ನೆರವು ಕೋಶದ ಸಂಯೋಜಕತ್ವ ದಲ್ಲಿ, “ಭಾರತೀಯ ಉತ್ತರಾಧಿಕಾರ ಕಾಯ್ದೆ- 1925 ” ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಾ.೨೦ರಂದು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾoಶುಪಾಲ ಡಾ. ಉದಯಕೃಷ್ಣ ಬಿ.ವಹಿಸಿದ್ದರು.

ಈ ಸಂದರ್ಭ ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ನ್ಯಾಯವಾದಿ ಜಗದೀಶ್ ಹುದೇರಿ , ” ಭಾರತೀಯ ಉತ್ತರಾಧಿಕಾರ ಕಾಯ್ದೆ- 1925″ ಪ್ರಕಾರ ಪಿತ್ರಾರ್ಜಿತ ಆಸ್ತಿ ಮತ್ತು ಸ್ವಯಾರ್ಜಿತ ಆಸ್ತಿಯನ್ನು ಪಡೆದುಕೊಳ್ಳುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ಗೌರವ ಅತಿಥಿ ಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾoಶುಪಾಲ, ಕಾನೂನು ಕಾಲೇಜಿನ ಆಡಳಿತಾಧಿಕಾರಿ ಪ್ರೊ. ದಾಮೋದರ ಗೌಡ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆಯ ಸಂಯೋಜನಾಧಿಕಾರಿ ಉಪನ್ಯಾಸಕಿ ರಚನಾ.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ಉಪನ್ಯಾಸಕಿ, ಕಾನೂನು ನೆರವು ಕೋಶದ ಸಂಯೋಜಕಿ ಕಲಾವತಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಕಾಲೇಜಿನ ಭೋದಕ, ಭೋದಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಮಹಾಕುಂಭಮೇಳಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪುಣ್ಯಸ್ನಾನ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget