ಕ್ರೈಂರಾಜಕೀಯ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಬರ್ಬರ ಮರ್ಡರ್, ಆಯುಧ ಪೂಜೆಯ ದಿನದಂದೇ ಮಾರಕಾಸ್ತ್ರಗಳಿಂದ ಕೊಚ್ಚಿದ ಹಂತಕರು..!

ನ್ಯೂಸ್ ನಾಟೌಟ್ :ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶ್ರೀನಿವಾಸಪುರ ಪಟ್ಟಣದ ಹೊರವಲಯದ ಹೊಗಳಗೆರೆ ಬಳಿ ಆರು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.

ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೂಡಲೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಲ್ಲಿ ಶ್ರೀನಿವಾಸ್ ಗುರುತಿಸಿಕೊಂಡಿದ್ದರು. ಶ್ರೀನಿವಾಸಪುರದ ರಾಜಕೀಯದಲ್ಲಿ ಚಿರಪರಿಚಿತರಾಗಿದ್ದ ಶ್ರೀನಿವಾಸ್ ಅವರು ರಾಜಕೀಯ ಜಿದ್ದಾಜಿದ್ದಿಗೆ ಹೆಸರುವಾಸಿಯಾಗಿದ್ದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್, ಕಾಂಗ್ರೆಸ್ ನಡುವಿನ ರಕ್ತಸಿಕ್ತ ರಾಜಕೀಯವನ್ನು ಕಂಡಿದೆ. ಇದೀಗ ದ್ವೇಷದ ರಾಜಕಾರಣಕ್ಕೆ ಶ್ರೀನಿವಾಸ್ ಮೇಲೆ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಶ್ರೀನಿವಾಸ್ ಅವರು ಕೋಲಾರ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡರು.

ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ 6 ಜನ ದುಷ್ಕರ್ಮಿಗಳ ತಂಡ ಇವರ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದೆ.ಗಂಭೀರವಾಗಿ ಗಾಯಗೊಂಡಿರುವ ಶ್ರೀನಿವಾಸ್ ಅವರನ್ನು ಕೂಡಲೇ ಜಾಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತು.

ಜಾಲಪ್ಪ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದ ಶ್ರೀನಿವಾಸ್ ಅವರು ಕೊನೆಗೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಜಾಲಪ್ಪ ಆಸ್ಪತ್ರೆಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಭೇಟಿ ನೀಡಿದ್ದು, ತಮ್ಮ ಪರಮಾಪ್ತ ಕೆ.ಎಂ ಶ್ರೀನಿವಾಸ್ ನಿಧನಕ್ಕೆ ಕಣ್ಣೀರು ಹಾಕಿದ್ದಾರೆ.

Related posts

ಮಚ್ಚಿನಿಂದ ತಲೆಗೆ ಹೊಡೆದು ಮಾಂಸದ ಅಂಗಡಿಯಲ್ಲಿ ವ್ಯಕ್ತಿಯ ಕೊಲೆ..! 8 ತಿಂಗಳ ಹಿಂದೆ ಅಂಗಡಿ ಶುರುಮಾಡಿದ್ದ ಗೆಳೆಯರು..!

ತರಗತಿಯ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಪ್ರಾಧ್ಯಾಪಕಿ..! ಪ್ರಾಂಶುಪಾಲರಿಂದ ಶಿಕ್ಷಕಿಗೆ ಕಿರುಕುಳ ಆರೋಪ..!

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು..! 7ನೇ ತರಗತಿ ಓದುತ್ತಿದ್ದ ಬಾಲಕನ ಸಾವಿಗೆ ಕಾರಣವೇನು..?