Uncategorized

ಶ್ರೀಕೃಷ್ಣ ಬಳಗ ಗೂನಡ್ಕ ವತಿಯಿಂದ 27ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ, ಆ.26 ರಂದು ಸಾಧಕರ ಸ್ಮರಣೆ ವಿಶೇಷ ಆಟೋಟ ಸ್ಪರ್ಧೆಗೆ ಆಹ್ವಾನ

ನ್ಯೂಸ್ ನಾಟೌಟ್: ಕಳೆದ 27 ವರ್ಷಗಳಿಂದ ಯಶಸ್ವಿಯಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆಸಿಕೊಂಡು ಬರುತ್ತಿರುವ ಶ್ರೀಕೃಷ್ಣ ಬಳಗ ಗೂನಡ್ಕ ವತಿಯಿಂದ ಈ ಸಲವೂ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿಕೊಳ್ಳಲಾಗಿದೆ.

ಆಗಸ್ಟ್ 26 ರಂದು ಗೂನಡ್ಕದ ಶ್ರೀ ಶಾರದಾ ಸಮುದಾಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಭಜನಾ ಕಾರ್ಯಕ್ರಮ ಮೊದಲನೆಯದಾಗಿ ನಡೆಯಲಿದೆ. ನಿವೃತ್ತ ಅರಣ್ಯಾಧಿಕಾರಿ ದೋಳ ವೀರಪ್ಪ ಗೌಡರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಾಮೋದರ್ ಮಾಸ್ತರ್ ಹಾಗೂ ಚಿದಾನಂದ ಮಾಸ್ತರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕ್ರೀಡಾಕೂಟವನ್ನು ಕೂಡ ಆಯೋಜಿಸಲಾಗಿದೆ. ಸಂಜೆ ಸಾಧಕರ ಸ್ಮರಣೆ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಲೀಲಾಧರ್ ಡಿ.ವಿ, ವರ್ತಕರ ಸಂಘದ ಅಧ್ಯಕ್ಷ ಯು.ಬಿ. ಚಕ್ರಪಾಣಿ, ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೆ.ಪಿ. ಜಗದೀಶ್ ಸೇರಿದಂತೆ ಅತಿಥಿಗಳು ಉಪಸ್ಥಿತರಿರಲಿದ್ದಾರೆ.

Related posts

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವಮಾನ

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: 21ಕ್ಕೆ ಮತ ಎಣಿಕೆ

ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್