ಶಿಕ್ಷಣ

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ! ವಿದ್ಯಾರ್ಥಿಗಳು ಪಾಲಿಸಬೇಕಾದ ಷರತ್ತುಗಳೇನು?

193

ನ್ಯೂಸ್ ನಾಟೌಟ್: 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಈ ಪ್ರತಿಭಾ ಪುರಸ್ಕಾರವನ್ನು ಪ್ರತಿಭಾವಂತ ನೌಕರರ ಮಕ್ಕಳಿಗೆ ನೀಡಲಾಗುತ್ತದೆ ಎಂದು ಮೂಲಗಳ ತಿಳಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಂಘ ಅರ್ಜಿ ಆಹ್ವಾನಿಸಿದ್ದು, 2023ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚಿನ ಅಂಕವನ್ನು ಗಳಿಸಿರುವ ವಿದ್ಯಾರ್ಥಿಗಳು ಈ ಪ್ರತಿಭಾ ಪುರಸ್ಕಾರಕ್ಕೆ ಅಪ್ಲೈ ಮಾಡಬಹುದು ಎನ್ನಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪಾಲಕರು ಅಂದರೆ ತಂದೆ ಹಾಗೂ ತಾಯಿ ಇಬ್ಬರೂ ಸಹ ರಾಜ್ಯ ಸರ್ಕಾರಿ ನೌಕರರಾಗಿ ಕೆಲಸ ಮಾಡುತ್ತಿರಬೇಕು. ಅಲ್ಲದೇ ಸಂಘದ ಸದಸ್ಯರಾಗಿರಬೇಕು ಎಂಬ ಷರತ್ತುಗಳನ್ನು ನೀಡಲಾಗಿದೆ.
ನೀವು ಅರ್ಜಿ ಸಲ್ಲಿಸಿ ನಂತರ ಈ ಪುರಸ್ಕಾರ ಸ್ವೀಕರಿಸಬೇಕಾಗುತ್ತದೆ. ನೀವು ಅರ್ಜಿ ಸಲ್ಲಿಸಲು ನಾವು ಇಲ್ಲಿ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ.
https://bit.ly/ksgeapp2023 ಈ ಜಾಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳು ಮಾತ್ರ ಅಪ್ಲೈ ಮಾಡಬಹುದು.

ನಿಮ್ಮ ಮಕ್ಕಳು ಖಾಸಗಿ ಶಾಲೆ ಅಥವಾ ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಗಳಾಗಬಾರದು. ಹೆಚ್ಚಿನ ಮಾಹಿತಿಗಾಗಿ ನೀವು 9902135813 ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಲು ಸೂಚಿಸಲಾಗಿದೆ.

See also  ಅಜ್ಜಾವರ: ಶಿಕ್ಷಣ ಸಚಿವರೇ ಇಲ್ನೋಡಿ..! ಬೀಳುತ್ತಿರುವ ಸರ್ಕಾರಿ ಕನ್ನಡ ಶಾಲೆಗೆ ಕಂಬ ಕೊಟ್ಟು ನಿಲ್ಲಿಸಿದ್ರು ಜನ..! 72 ಮಕ್ಕಳಿದ್ದ ಶಾಲೆಯಲ್ಲಿ ಈಗ ಕೇವಲ 12 ಮಕ್ಕಳು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget