Latestಉಪ್ಪಿನಂಗಡಿಪುತ್ತೂರು

ಉಪ್ಪಿನಂಗಡಿ/ಪದ್ಮುಂಜ:ಕಲಿಕೆಯಲ್ಲಿ ಹಿಂದುಳಿದಿದ್ದಾರೆಂದು ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!!100 ಪರ್ಸೆಂಟ್ ಫಲಿತಾಂಶ ಉದ್ದೇಶದಿಂದ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ!

602

ನ್ಯೂಸ್‌ ನಾಟೌಟ್: ಕರ್ನಾಟಕದಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಭವಿಷ್ಯ ನಿರ್ಧಾರ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ಕಡೆ ವಿಚಿತ್ರ ಘಟನೆ ಬಗ್ಗೆ ವರದಿಯಾಗಿದೆ. 100 ಪರ್ಸೆಂಟ್ ರಿಸಲ್ಟ್ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದ್ದು,ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯವೆಂಬ ಮೊಗ್ಗನ್ನೇ ಹಿಸುಕಿದ್ದಾರೆ. ಕಲಿಕೆಯಲ್ಲಿ ಹಿಂದೆಯಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಇಬ್ಬರು ವಿದ್ಯಾರ್ಥಿಗಳು ಈ ಭಾಗ್ಯದಿಂದ ವಂಚಿತರಾಗಿದ್ದಾರೆ.

ಘಟನೆ ಎಲ್ಲಿ ?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎನ್ನಲಾಗಿದೆ. ಮುಖ್ಯ ಶಿಕ್ಷಕರು 100 ಪರ್ಸೆಂಟ್ ಫಲಿತಾಂಶ ದಾಖಲಿಸಬೇಕೆಂಬ ಉದ್ದೇಶ ಹೊಂದಿದ್ದು ಓದೋದರಲ್ಲಿ ಹಿಂದುಳಿದ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಲ್ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ನಮ್ಮ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಇತ್ತ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಎಸ್​ಡಿಎಂಸಿ ಸಮನ್ವಯ ವೇದಿಕೆಗೆ ಪತ್ರ ಬರೆದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಶಾಲೆಗೆ ಭೇಟಿ ನೀಡಿದ್ದ ಬಿಇಓ ಹಾಲ್ ಟಿಕೆಟ್ ಕೊಡಿಸಿದ್ದು, ಉಳಿದ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸುವುದಾಗಿ ಬಿಇಒ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

 

View this post on Instagram

 

A post shared by News not out (@newsnotout)

 

 

 

View this post on Instagram

 

A post shared by News not out (@newsnotout)

See also  ಪತ್ನಿಯ ತಂದೆಯ ವಾಟ್ಸಪ್ ನಲ್ಲಿ ತಲಾಖ್ ಸಂದೇಶ ಕಳುಹಿಸಿದ ಯುವಕ;ಯುವಕನನ್ನು ಊರಿಗೆ ಕರೆ ತರಲು ಪೊಲೀಸ್‌ ಯತ್ನ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget