ಕ್ರೈಂರಾಜ್ಯವೈರಲ್ ನ್ಯೂಸ್ಶಿಕ್ಷಣ

SSLC ಪರೀಕ್ಷೆಯಲ್ಲಿ ಫೇಲ್ ಎಂದು ನೇಣಿಗೆ ಶರಣಾದ ವಿದ್ಯಾರ್ಥಿನಿ..! ಆದ್ರೆ ಆಕೆ ಪಾಸ್ ಆಗಿದ್ದಳು..!

236

ನ್ಯೂಸ್ ನಾಟೌಟ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡ ಬೆನ್ನಲ್ಲೇ ಹಲವು ಮಕ್ಕಳು ತಮ್ಮ ದುಡುಕಿನ ನಿರ್ಧಾರದಿಂದ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ. ಅಂತಹದ್ದೇ ಘಟನೆಯೊಂದು ಮಂಡ್ಯದಲ್ಲಿ ಗುರುವಾರ(ಮೇ.೯) ನಡೆದಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಪ್ಪಾಗಿ ತಿಳಿದು ನೇಣಿಗೆ ಶರಣಾದ್ದಾಳೆ ಎನ್ನಲಾಗಿದೆ.

ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

See also  ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಾಂಕ ಘೋಷಣೆ, ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget