ಶಿಕ್ಷಣ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್! ಏನಿದು ಹೊಸ ನಿಯಮ!

246

ನ್ಯೂಸ್‌ನಾಟೌಟ್‌: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್ (ಕೃಪಾಂಕ) ಪಡೆಯುವ ಅವಕಾಶವಿದೆ ಎಮದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಶೈಕ್ಷಣಿಕ ವರ್ಷದಲ್ಲಿ ಕೊರೊನಾದ ಹೊಡೆತ ಅಷ್ಟೊಂದು ತೀವ್ರವಾಗಿ ಬಾಧಿಸದಿದ್ದರೂ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷ ವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಕೊರೊನಾದ ಸಮಯದಲ್ಲಿ ಕಲಿಕೆ ಮೇಲಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಕಾರಣದಿಂದ ಕೃಪಾಂಕ ನೀಡಲಾಗುತ್ತಿದೆ. ಒಟ್ಟಾರೆ ಕನಿಷ್ಠ ಅಂಕಗಳನ್ನು ಗಳಿಸುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸುವುದು ಮಂಡಳಿಯ ಉದ್ದೇಶ ಎನ್ನಲಾಗಿದೆ.

ಎಸೆಸೆಲ್ಸಿಯ 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ 3 ವಿಷಯಗಳಿಗೆ ತಲಾ ಶೇ. 10ರಷ್ಟು ಆದರೆ ಒಟ್ಟು 26 ಅಂಕ ಮೀರದಂತೆ ಕೃಪಾಂಕ ದೊರೆಯಲಿದೆ. ಪ್ರಥಮ ಭಾಷೆಯಲ್ಲಿ ಗರಿಷ್ಠ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಠ 8 ಅಂಕವನ್ನು ಕೃಪಾಂಕದ ರೂಪದಲ್ಲಿ ಪಡೆಯಬಹುದಾಗಿದೆ.
ಕಳೆದ ವರ್ಷವೂ ಶೇ.10 ಕೃಪಾಂಕ ಗಳನ್ನು ನೀಡಲಾಗಿತ್ತು. ಕೃಪಾಂಕದ ನೆರವಿನಿಂದ 40 ಸಾವಿರ ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದರು. 2019ರ ವರೆಗೆ ಶೇ. 5 ಕೃಪಾಂಕಗಳನ್ನು ಮಾತ್ರ ನೀಡಲಾಗುತ್ತಿತ್ತು ಎಂದು ತಿಳಿಸಲಾಗಿದೆ.

See also  ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಎಸ್.ಎಸ್ ಘಟಕಕ್ಕೆ ಅತ್ಯುತ್ತಮ ಸೇವಾ ಯೋಜನೆ ಘಟಕ ಪ್ರಶಸ್ತಿ, ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್ ರವರಿಗೆ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget