Latestಉಡುಪಿಉಡುಪಿಕರಾವಳಿದಕ್ಷಿಣ ಕನ್ನಡಮಂಗಳೂರುರಾಜ್ಯ

SSLC ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ ದ್ವಿತೀಯ ಸ್ಥಾನ

1.1k

ನ್ಯೂಸ್ ನಾಟೌಟ್: 2025ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಒಟ್ಟಾರೆ ಶೇ.62.34 ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಮತ್ತು ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ.

2024-25ನೇ ಸಾಲಿನ ಎಸ್ ​ಎಸ್ ​ಎಲ್ ​ಸಿ ಪರೀಕ್ಷೆ ಫಲಿತಾಂಶ ಇಂದು(ಮೇ.2) ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಬೆಳಗ್ಗೆ 11.45ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಮಧ್ಯಾಹ್ನ 12.30ರಿಂದ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರಿಶೀಲಿಸಬಹುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾ.21 ರಿಂದ ಏ.4 ರವರೆಗೆ ರಾಜ್ಯಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ರಾಜ್ಯದಲ್ಲಿ ಒಟ್ಟು 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂದೇ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಪ್ರಥಮ ಸ್ಥಾನ ದಕ್ಷಿಣ ಕನ್ನಡ – 91.12% , ದ್ವಿತೀಯ ಸ್ಥಾನ ಉಡುಪಿ – 89.96%, ಉತ್ತರ ಕನ್ನಡ – 83.19% ತೃತೀಯ ಸ್ಥಾನ ಪಡೆದುಕೊಂಡಿದೆ. ಕ್ರಮವಾಗಿ ಶಿವಮೊಗ್ಗ – 82.29% ಕೊಡಗು – 82.21% ನಂತರದ ಸ್ಥಾನದಲ್ಲಿವೆ.

 

See also  ಯುವಜನತೆಯಲ್ಲಿ ಹೆಚ್ಚುತ್ತಿದೆ ಹೃದಯಾಘಾತ..! , ತೂಕ ಕಡಿಮೆ ಮಾಡೋ ‘ಕೀಟೋ’ ಡಯಟ್' ಎಷ್ಟು ಡೇಂಜರ್‌?ವೈದ್ಯರು ಹೇಳೊದೇನು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget