Uncategorized

ಬಜೆಟ್ : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಘೋಷಣೆ

ಬೆಂಗಳೂರು: ರಾಜ್ಯ ಸರಕಾರ ಬಜೆಟ್ ಮಂಡನೆ ಮಾಡಿದ್ದು ಈ ಸಲ ಕರಾವಳಿಯ ಭಾಷೆ, ಸಂಸ್ಕೃತಿಗೆ ಹೆಚ್ಚಿನ ಮನ್ನಣೆ ನೀಡಲಾಗಿದೆ. ವಿಶೇಷವಾಗಿ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ಉಳಿದಂತೆ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ ನೀಡಲಾಗಿದೆ. ಅಲ್ಲದೆ, ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.

ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ ಮಾಡಲಾಗುವುದು. ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Related posts

ಶ್ರೀ ಕೃಷ್ಣನ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ : ಸಿಎಂ ಬಸವರಾಜ್ ಬೊಮ್ಮಾಯಿ

ಬಜರಂಗದಳ ಅಪಾಯಕಾರಿ ಸಂಘಟನೆ: ಫೇಸ್ ಬುಕ್ ಆಂತರಿಕ ವರದಿ

ಹಾಲಿನ ಪ್ಯಾಕೇಟ್ ನಲ್ಲಿ ದಿವಂಗತ ಪುನೀತ್ ರಾಜ್‌ಕುಮಾರ್‌ ಫೋಟೋ, ಸುಳ್ಳು ಸುದ್ದಿ..!