ಕರಾವಳಿಸುಳ್ಯ

ಸುಳ್ಯ : ಬಿ.ಸಿ.ಎಂ. ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

407

ನ್ಯೂಸ್ ನಾಟೌಟ್: ಬಿ. ಸಿ .ಎಂ. ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯ ಕುರುಂಜಿಭಾಗ್ ಸಮೀಪ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಏನಿದು ಘಟನೆ ?

ಸೋನಿಯಾ (18) ಸುಳ್ಯ ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ.ಬೆಂಗಳೂರು ಮೂಲದವಳು. ರಾಮನಾಥ ಪುರದ, ಕಾರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇ ಲ್ ನಲ್ಲಿ ಉಳಿದುಕೊಂಡಿದ್ದಳು. ಮಧ್ಯಾಹ್ನ ಆಕೆ ರೂಮಿನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಮ್ ಗೆ ಹೋದಾಗ ಬಾಗಿಲು ಹಾಕಿತ್ತು . ಎಷ್ಟು ಬಾಗಿಲು ತಟ್ಟಿದರೂ ಬಾಗಿಲು ತೆಗಿಯಲಿಲ್ಲ, ಸೋನಿಯ ಮಲಗಿರಬಹುದು ಎಂದು ಭಾವಿಸಿದಳು.

ಸ್ವಲ್ಪ ತಡವಾಗಿ ಮತ್ತೆ ಬಾಗಿಲು ಬಡಿದರೂ ತೆಗಿಯದೇ ಇದ್ದ ಕಾರಣ ಸಂಶಯಗೊಂಡ ಆಕೆ ಗೆಳತಿ ವಾರ್ಡನ್ ಗೆ ಮಾಹಿತಿ ನೀಡಿದ್ದಾಳೆ.ಹಾಸ್ಟೆಲ್ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪೋಲಿಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ ಐ ದಿಲೀಪ್ ಕುಮಾರ್ ಮೊದಲಾದವರು ಆಗಮಿಸಿದ್ದು ,ವಿದ್ಯಾರ್ಥಿನಿ ಮೃತದೇಹವನ್ನು ಮಹಜರಿಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

See also  ಸುಳ್ಯ: ಬ್ಯಾಂಕ್ ಆಫ್ ಬರೋಡಾ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್, ರೋಚಕ ಫೈನಲ್ ನಲ್ಲಿ ಮುಗ್ಗರಿಸಿದ ಯೇನೆಪೋಯ ಯೂನಿವರ್ಸಿಟಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget