ನ್ಯೂಸ್ ನಾಟೌಟ್: ಆಪರೇಷನ್ ಸಿಂಧೂರವನ್ನು ಆರಂಭಿಸಿದಾಗಲೇ ಪಾಕಿಸ್ತಾನಕ್ಕೆ ಆ ಬಗ್ಗೆ ಮಾಹಿತಿ ನೀಡಿದ್ದೆವು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿಕೆ ನೀಡಿದ್ದಕ್ಕೆ ಈ ಹಿಂದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆರಂಭದಲ್ಲೇ ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ದೊಡ್ಡ ಅಪರಾಧ ಎಂದಿದ್ದರು. ಹಾಗೇ, ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆಯ ಎಷ್ಟು ಯುದ್ಧವಿಮಾನಗಳು ನಾಶವಾಗಿವೆ ಎಂದು ಪ್ರಶ್ನೆ ಮಾಡಿದ್ದರು.
ಆದರೆ, ಸಚಿವ ಜೈಶಂಕರ್ ಅದಕ್ಕೆ ಉತ್ತರಿಸಿರಲಿಲ್ಲ. ಹೀಗಾಗಿ, ಅದೇ ಪ್ರಶ್ನೆಯನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಜೈಶಂಕರ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಯನ್ನೇ ಇಟ್ಟುಕೊಂಡು ಪಾಕಿಸ್ತಾನದ ಮಾಧ್ಯಮದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಇದಕ್ಕೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಟೀಕಾಪ್ರಹಾರ ನಡೆಸಿದ್ದು, ಭಾರತದ ವಿರುದ್ಧ ಪಾಕಿಸ್ತಾನದಲ್ಲಿ ನ್ಯೂಸ್ ಮಾಡಲು ರಾಹುಲ್ ಗಾಂಧಿಯೇ ವಿಷಯಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
EAM Jaishankar’s silence isn’t just telling — it’s damning.
So I’ll ask again: How many Indian aircraft did we lose because Pakistan knew?
This wasn’t a lapse. It was a crime. And the nation deserves the truth. https://t.co/izn4LmBGJZ
— Rahul Gandhi (@RahulGandhi) May 19, 2025
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಮತ್ತೊಮ್ಮೆ ಪ್ರಶ್ನಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ವಿನಾಕಾರಣ ರಾಹುಲ್ ಗಾಂಧಿ ಸಚಿವ ಜೈಶಂಕರ್ ಅವರ ಹೇಳಿಕೆಗಳನ್ನು ಪದೇ ಪದೇ ತಪ್ಪಾಗಿ ಬಿಂಬಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ಶಕ್ತಿಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವಂತೆ ತೋರುತ್ತಿದೆ ಎಂದಿದ್ದಾರೆ. ಪಾಕಿಸ್ತಾನದ ಮೇಲಿನ ದಾಳಿಯಲ್ಲಿ ಭಾರತದ ಎಷ್ಟು ಯುದ್ಧ ವಿಮಾನಗಳಿಗೆ ಹಾನಿಯಾಗಿದೆ? ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದರು. ಆದರೆ, ಸಚಿವ ಜೈಶಂಕರ್ ಅದಕ್ಕೆ ಉತ್ತರಿಸಲು ನಿರಾಕರಿಸಿದ್ದು, ಎಲ್ಲ ಫೈಟರ್ ಜೆಟ್ಗಳೂ ಸುರಕ್ಷಿತವಾಗಿ ಭಾರತದೊಳಗೆ ಬಂದಿದ್ದಾರೆ ಎಂದಿದ್ದರು.
ಸಚಿವರ ಹೇಳಿಕೆಗಳನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಪ್ಪಾಗಿ ನಿರೂಪಿಸಿರುವುದು ದುರುದ್ದೇಶಪೂರಿತ ಉದ್ದೇಶ ಎಂದು ಬಿಜೆಪಿ ಹೇಳಿದೆ.
ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣಕ್ಕೆ ತಿರುವು, ಬಾಲಕಿಗೆ ರೈಲು ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ಪುತ್ತೂರು: ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಬೈಕ್..! ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!