ಕ್ರೈಂದೇಶ-ಪ್ರಪಂಚದೇಶ-ವಿದೇಶಬೆಂಗಳೂರುರಾಜಕೀಯರಾಜ್ಯವಿಡಿಯೋವೈರಲ್ ನ್ಯೂಸ್

ಪ್ರಜ್ವಲ್ ರೇವಣ್ಣನನ್ನು ಎಸ್.ಐ.ಟಿ ಕಚೇರಿಗೆ ಕರೆತಂದ ಮಹಿಳಾ ಅಧಿಕಾರಿಗಳ ಪಡೆ..! 14 ದಿನ ಪೊಲೀಸ್ ಕಸ್ಟಡಿಗೆ ಕೇಳಲಿರುವ ಅಧಿಕಾರಿಗಳು..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ, ಬಳಿಕ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆ ಪೊಲೀಸ್ ವಾಹನದಲ್ಲಿ ಕಳುಹಿಸಿದ್ದು ವಿಶೇಷವಾಗಿತ್ತು.

ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು.

ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆತಂದಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಇಂದು(ಮೇ.31) ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ೧೪ದಿನ ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ ಎನ್ನಲಾಗದೆ.

ಜೀಪ್‌ ಚಾಲಕ ಹೊರತು ಪಡಿಸಿದರೆ ಉಳಿದವರೆಲ್ಲಾ ಮಹಿಳಾ ಅಧಿಕಾರಿಗಳು, ಸಂಸದನ ಬಂಧನ ಸಂದರ್ಭದಲ್ಲಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಜುಗರ ಉಂಟುಮಾಡುವ ನಿಟ್ಟಿನಲ್ಲಿ ಬಂಧನವಾಗಿದೆ ಎಂದು ಮೂಲಗಳು ತಿಳಿಸಿವೆ.

Related posts

98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು..! 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಳು ಪತ್ತೆ

ಇನ್ನೊಬ್ಬನ ಹೆಂಡ್ತಿ ಜೊತೆ ಯುವಕ ಹಿಮಾಚಲ ಪ್ರದೇಶಕ್ಕೆ ಪರಾರಿ..! ಹಿಡಿದು ಕರೆತಂದು ಮಲ-ಮೂತ್ರ ತಿನ್ನಿಸಿ, ಚಪ್ಪಲಿ ಹಾರ ಹಾಕಿದ ಪತಿ..! ಇಲ್ಲಿದೆ ವೈರಲ್ ವಿಡಿಯೋ

ಪದವಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ..! ಪೋಷಕರು ಮತ್ತು ಶ್ರಾವ್ಯಾ ನಡುವಿನ ಒಂದು ವಾರದ ಗಲಾಟೆ ಸಾವಿನಲ್ಲಿ ಅಂತ್ಯ..!